
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:ಡಿ,22- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಅವರು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಾಳೆ ಮಂಗಳವಾರ ಬೆಳಗ್ಗೆ 11.30 ಕ್ಕೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಈ ಸಭೆಯ ಅತಿಥ್ಯವಹಿಸಿದೆ. ಸಭೆಯಲ್ಲಿ ಸುಗಮ ರಸ್ತೆ ಸಂಚಾರ, ಅಪರಾಧ ಪ್ರಕರಣಗಳ ತಡೆಗಟ್ಟುವಿಕೆ, ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಭದ್ರತೆ ಇನ್ನಿತರೆ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ನಮ್ಮ ಸಂಸ್ಥೆಯ ಮಾನ್ಯತೆ ಪಡೆದಿರುವ ಸಂಘ-ಸಂಸ್ಥೆಗಳವರು ಪಾಲ್ಗೊಳ್ಳಲು ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್, ಕಾರ್ಯದರ್ಶಿ ಕೆ.ಸಿ.ಸುರೇಶಬಾಬು ಕೋರಿದ್ದಾರೆ.























