
ಕರ್ಣಾಟಕ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ದೇಬಾಶೀಷ್ ಪಾಂಡ
ಮಂಗಳೂರು- ದೇಶದ ವಿಕಸಿತ್ ಭಾರತ್- ೨೦೪೭’ ಸಾಕಾರಗೊಳಿಸಲು ಬ್ಯಾಂಕ್‌ಗಳ ಪಾತ್ರ ಮಹತ್ವದ್ಹಾಗಿದ್ದು ದೇಶದ ಆರ್ಥಿಕ ವಿಕಾಸದಲ್ಲಿ ಬ್ಯಾಂಕ್‌ಗಳು ಪ್ರಮುಖ ಪಾತ್ರವಹಿಸಬೇಕಿದೆ ಎಂದು ಮಾಜಿ ಐಎಎಸ್ ಅಧಿಕಾರಿ, ನೀತಿ ಸುಧಾರಕ ದೇಬಾಶೀಷ್ ಪಾಂಡ ಸಲಹೆ ನೀಡಿದ್ದಾರೆ.
ಅವರು ಬುಧವಾರ ನಗರದ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ’ವಿಕಸಿತ್ ಭಾರತ್- ೨೦೪೭: ಹಣಕಾಸು ಸೇವೆಗಳ ಪಾತ್ರ ದ ಕುರಿತು ಪ್ರಧಾನ ಉಪನ್ಯಾಸ ನೀಡುತ್ತಾ ಭಾರತವು ವಿಶ್ವದ ೪ನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿದೆ, ಈ ದೇಶ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಲಿದೆ ಎಂದು ಹಿಂದೆ ನಾವು ಊಹಿಸಿರಲಿಲ್ಲ ಆದರೆ ಈ ಸಾಧನೆ ಆಗಿದೆ. ನಾವು ವಿಕಸಿತ್ ಭಾರತ್ ಎಂಬ ಮಹಾ ದೃಷ್ಟಿಯತ್ತ ಸಾಗುತ್ತಿದ್ದೇವೆ. ಈ ಪರಿಕಲ್ಪನೆ ಯನ್ನು ಸಾಕಾರಗೊಳಿಸುವುದು ಸಂಘ ಸಂಸ್ಥೆಗಳು, ಉದ್ಯಮ ಕ್ಷೇತ್ರ, ಅಧಿಕಾರಿಗಳು ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನೂ ಸರಕಾರದೊಂದಿಗೆ ಕೈ ಜೋಡಿಸಬೇಕಾಗಿದೆ. ಇದಕ್ಕೆ ದೀರ್ಥಕಾಲಿಕ, ಉನ್ನತ ವೇಗದ ಕಾರ್ಯೋನ್ಮುಖತೆಯೊಂದಿಗೆ ಉತ್ಪಾದಕತೆ, ಬಂಡವಾಳದ ದಕ್ಷತೆ ಮತ್ತು ಕಾರ್ಯಗತ ಸಾಮರ್ಥ್ಯ ಹೆಚ್ಚಳ, ಆರ್ಥಿಕ ಸ್ಥಿರತೆ, ಶಕ್ತಿಶಾಲಿಯಾದ ಹಣಕಾಸು ವ್ಯವಸ್ಥೆ ಮತ್ತು ಜಾಗತಿಕ ಆಘಾತಗಳನ್ನು ಎದುರಿಸುವ ಸಾಮರ್ಥ್ಯಬೇಕಾಗುತ್ತದೆ. ಈ ಸವಾಲು ಗಳನ್ನು ಎದುರಿಸಬೇಕಾಗಿದೆ ಎಂದು ದೇಬಾಶೀಷ್ ಹೇಳಿದರು.


ಬ್ಯಾಂಕ್‌ಗಳು ಗುರಿ ಕೇವಲ ಲಾಭ ಗಳಿಕೆಯಲ್ಲ ತನ್ನ ಮೂಲ ಧ್ಯೇಯ ವಾದ ಸಾಮಾಜಿಕ ಪರಿವರ್ತನೆಯ ಕೆಲಸ ಆಗಬೇಕಿವೆ. ದೇಶದ ಬೆಳವಣಿಗೆ ಮತ್ತು ಆರ್ಥಿಕ ಸ್ಥಿರತೆಯ ಆಧಾರ ಸ್ತಂಭಗಳಾದ ಈ ಹಣಕಾಸು ಸಂಸ್ಥೆಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕಾಗಿದೆ. ಏಕರೂಪದ ಕಾರ್ಯ ವಿಧಾನವನ್ನು ಪರಿವರ್ತಿಸಿ, ಹಣಕಾಸಿನ ವಿವಿಧ ಮಾದರಿ ಗಳ
ಕಾರ್ಯಯೋಜನೆಯ ಅನುಷ್ಠಾನಕ್ಕೆ ಮುಂದಾಗಬೇಕಿದೆ ಎಂದರು.ಆದುನಿಕ ಡಿಜಿಟಲ್ ಯುಗದಲ್ಲಿ ಚೆಕ್‌ಬುಕ್ ಇತಿಹಾಸ ಪುಟ ಸೇರಿದೆ. ಟೆಲಿಫೋನ್ ಡಯಲ್ ಮಾಡುವ ಕಾಲದಿಂದ ಇಂದಿನ ಮೊಬೈಲ್ ಮತ್ತು ವೀಡಿಯೊ ಸಂವಹನದ ಯುಗದವರೆಗೆ ತಲೆಮಾರುಗಳ ಪರಿವರ್ತನೆಯಾಗಿದೆ, ಕೃತಕ ಬುದ್ಧಿ ಮತ್ತೆ ಬಾಗಿಲು ತಟ್ಟುತ್ತಿದೆ. ಇಂತಹ ತಂತ್ರಜ್ಞಾನ ಹೇಗೆ ಬಳಕೆ ಮಾಡಬೇಕು ಎಂಬುದು ನಮ್ಮವಿವೇಚನೆಯ ಮೇಲಿದೆ. ಈ ಕಾಲಘಟ್ಟದಲ್ಲಿ ತಂತ್ರಜ್ಞಾನ ಅನಿವಾರ್ಯ; ಅದಕ್ಕೆ ಹೊಂದಿ ಕೊಳ್ಳ ಬೇಕಾಗಿದೆ ಎಂದು ಅವರು ಹೇಳಿದರು.
ಕರ್ಣಾಟಕ ಬ್ಯಾಂಕ್‌ನ ಕಳೆದ ೧೦೨ ವರ್ಷಗಳ ಪಯಣ, ಮೈಲುಗಲ್ಲುಗಳ ಕಾಲಘಟ್ಟದಲ್ಲಿ ನಡೆದ ಬದಲಾವಣೆಗಳು ಪ್ರೇರಣಾದಾ ಯಕವಾಗಿವೆ. ಸಂಸ್ಥಾಪಕರ ದಿನವನ್ನು ನಾನು ಕೇವಲ ಒಂದು ಆಚರಣೆಯ ಮೈಲುಗಲ್ಲು ಎಂದು ನೋಡುವುದಲ್ಲ ಇದು ಸಂಸ್ಥೆಯ ಬಗ್ಗೆ ಒಂದು ಕ್ಷಣಕಾಲ ನಿಂತು ಚಿಂತನೆ ಮಾಡುವ ದಿನ. ಈ ಮೂಲಕ ಒಂದು ಪರಂಪರೆಯನ್ನು ಗೌರವಿಸುತ್ತಿದ್ದೀರಿ. ಕರ್ಣಾಟಕ ಬ್ಯಾಂಕ್‌ನ ಮ್ಯೂಸಿಯಂಗೆ ಭೇಟಿ ನೀಡಿದಾಗ ಸ್ಥಾಪಕ ಮಹನೀಯರ ಜೀವನಯಾನ, ಅವರ ಮೌಲ್ಯ ವ್ಯವಸ್ಥೆ ಮತ್ತು ಬ್ಯಾಂಕಿನ ಆರಂಭದಿಂದ ಇಂದಿನ ಮಹತ್ತರ ಸಾಧನವರೆಗೆ ನಡೆದ ಬೆಳವಣಿಗೆ ಯನ್ನು ನೋಡುವ ಅವಕಾಶ ದೊರೆತದ್ದು ಸೌಭಾಗ್ಯ ಎಂದು ದೇಬಾಶೀಷ್ ಹೇಳಿದರು.
ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡುತ್ತಾ ವಿಕಸಿತ್ ಭಾರತ್ ದೃಷ್ಟಿಕೋನವು ಬ್ಯಾಂಕ್‌ಗಳಿಗೆ ಅನೇಕ ಅವಕಾಶಗಳನ್ನು ಸೃಷ್ಟಿಸಲಿದೆ. ಈ ಬೆಳವಣಿಗೆಯಲ್ಲಿ ಕೈಜೋಡಿಸುವ ಸಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಬದ್ಧತೆಯಿಂದ ಕಾರ್ಯ ನಿರ್ವಹಿಸಲಿದೆ. ಬ್ಯಾಂಕಿನ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಹತೆಗೆ ವಿಕಸಿತ್ ಭಾರತ್ ಕಾರ್ಯ ಸಾಧನೆಯಲ್ಲಿ ಸಕ್ರಿಯ ಪಾತ್ರ ವಹಿಸಲಿದ್ದೇವೆ ಎಂದರು.
ಬ್ಯಾಂಕ್‌ನ ಎಂಡಿ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಮಾತನಾಡುತ್ತಾ ಕರ್ಣಾಟಕ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಭವಿಷ್ಯದಲ್ಲಿ ಇನ್ನಷ್ಟು ತಂತ್ರಜ್ಞಾನದ ಅಳವಡಿಕೆಯೊಂದಿಗೆ ಸಾಗಲಿದೆ, ಬ್ಯಾಂಕಿನ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿಯಲ್ಲಿ ಉನ್ನತ ಸ್ಥಾನಕ್ಕೇರಲು ಬ್ಯಾಂಕ್‌ನ ಸಂಸ್ಥಾಪಕರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆ ಕಾರಣ ಎಂದು ಹೇಳಿದರು.
ಕರ್ಣಾಟಕ ಬ್ಯಾಂಕ್‌ನ ಸಂಸ್ಥಾಪಕರ ಭಾವಚಿತ್ರಗಳಿಗೆ ಗೌರವ ಸಲ್ಲಿಸಿಸಮಾರಂಭದಲ್ಲಿ ದೇಬಾಶೀಷ್ ಪಾಂಡರನ್ನು ವೇದಿಕೆ ಯಲ್ಲಿ ಸನ್ಮಾನಿಸ ಲಾಯಿತು ಬಳಿಕ ’ನಾರಿ ರಂಗಿಣಿ’ ಸಂಗೀತ ಕಛೇರಿ ನಡೆಯಿತು.





























