ನೀಲಕಂಠಪ್ಪಗೆ ” ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ” ಪ್ರಶಸ್ತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ನ,16- ಜಿಲ್ಲಾ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ. ಜನತಾ ಬಜಾರ್ ಮಾಜಿ ಅಧ್ಯಕ್ಷ ಜಿ.ನೀಲಕಂಠಪ್ಪ ಅವರು ” ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಾಳೆ ಹೊಸಪೇಟೆಯ “ಸುರಭಿ ಕಲ್ಯಾಣ ಮಂಟಪ” ದಲ್ಲಿ ನಡೆಯುವ ರಾಜ್ಯ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಈ ” ಪ್ರಶಸ್ತಿ ಪ್ರಧಾನ ಮಾಡಲಿದೆ.