ನೃತ್ಯ ಸಂಯೋಜಕನ ವಿರುದ್ಧ ಪೋಕ್ಸೊ

ಹೈದರಾಬಾದ್,ಅ.4-ಟಾಲಿವುಡ್ ಚಲನಚಿತ್ರೋದ್ಯಮದಲ್ಲಿ ನೃತ್ಯ ಸಂಯೋಜಕ ಕೃಷ್ಣ ಅವರನ್ನು ಕಾನೂನು ಆರೋಪಗಳ ಆಧಾರದ ಮೇಲೆ ಬಂಧಿಸಲಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಗಚಿಬೌಲಿ ಪೆÇಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪೆÇೀಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಕುಟುಂಬವು ಕೃಷ್ಣ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ ನಂತರ ಪೆÇಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಈ ವಿಷಯ ತಿಳಿದ ನಂತರ ಕೃಷ್ಣ ತಲೆಮರೆಸಿಕೊಂಡಿದ್ದು, ಹಲವು ವಾರಗಳ ಕಾಲ ಪತ್ತೆಯಾಗಿರಲಿಲ್ಲ ಎನ್ನಲಾಗಿದೆ .ಪೆÇಲೀಸರಿಂದ ತಪ್ಪಿಸಿಕೊಳ್ಳಲು ಆತ ಬೆಂಗಳೂರಿಗೆ ಪರಾರಿಯಾಗಿದ್ದ ಕೊನೆಗೆ, ಕೃಷ್ಣನನ್ನು ಪೆÇಲೀಸರು ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಕೃಷ್ಣ ವಿವಾದದಲ್ಲಿ ಸಿಲುಕಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಹ, ಹಲವಾರು ಯುವಕರನ್ನು ವಂಚಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಅವರ ಮೇಲಿತ್ತು, ಆದರೆ ಆ ಸಮಯದಲ್ಲಿ ಅವರ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿರಲಿಲ್ಲ. ಆದಾಗ್ಯೂ, ಈಗ ಅವರ ವಿರುದ್ಧ ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ, ಅಭಿಮಾನಿಗಳು ಅವರ ನಡತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಕೃಷ್ಣನನ್ನು ಬಂಧಿಸಿದ ಪೆÇಲೀಸರು ಆತನನ್ನು ತನಿಖೆಗಾಗಿ ಹೈದರಾಬಾದ್‍ಗೆ ಕರೆತಂದಿದ್ದಾರೆ. ಪೆÇಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಮತ್ತು ಹೆಚ್ಚಿನ ವಿಷಯಗಳು ಹೊರಬರುವ ಸಾಧ್ಯತೆಗಳಿವೆ.