ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ-ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ನಡೆದಿದೆ.
ಮೃತರನ್ನು ಇಲ್ಲಿನ ನಿವಾಸಿ ಗಣೇಶ್ ಆಚಾರ್ಯ(೪೨) ಎಂದು ಗುರುತಿಸಲಾಗಿದೆ.
ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಆಚಾರ್ಯ ಅವರು, ಆ.೨೦ರಂದು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.