ನೇಪಾಳದಲ್ಲಿ ಕುಳಿತು ವಂಚಿಸುತ್ತಿರುವ ವಂಚಕರ ಬಂಧನ

ಮಂಗಳೂರು- ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು ೧೧ ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ ೧೬ ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. ೦೫ ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು ೬೨೪ ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು ೪೫೮೦ ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ೧ ಬ್ಯಾಂಕ್ ಖಾತೆಯಲ್ಲಿ ೧೬೭ ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ ೧೦ ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ ೩೦,೭೦,೨೬,೭೨೫ ಹಣ ವರ್ಗಾವಣೆ ಆಗಿದ್ದು, ಉಳಿದ ೬೨೩ ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆದಬೇಕಾಗಿದೆ.
ಪ್ರಕರಣದ ವಿವರ
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ ೦೨/೨೦೨೬ ಕಲಂ ೬೬(ಸಿ), ೬೬(ಡಿ), ಐಟಿ ಕಾಯ್ದೆ ಕಲಂ ೩೧೮(೪), ೩೦೮(೫) ಬಿಎನ್ ಎಸ್ ಪ್ರಕರಣದಲ್ಲಿ ಪಿರ್ಯಾದಿದಾರರಿಂದ ೧ ಕೋಟಿ ೩೮ ಲಕ್ಷ ಹಣವನ್ನು ೧೦ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.
ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ.
ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ಫಿರ್ಯಾದಿಗೆ ನೀಡಿದ ೧೦ ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ ಓಅಖP Pಔಖಖಿಂಐ ನಲ್ಲಿ ಸುಮಾರು ೧೨೮ ಪ್ರಕರಣಗಳು ಮತ್ತು ಒಟ್ಟು ೩೬ ದಾಖಲಾಗಿರುತ್ತದೆ.
ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನ.
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operatorಗಳು ಮತ್ತು OTP Workerರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.
ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ ೫% ರಿಂದ ೧೦% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USಆಖಿ ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.
ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ.
ಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು ೬೦ ಲಕ್ಷದಿಂದ ೦೧ ಕೋಟಿಯವರೆಗೆ Investment fraudಗೆ ಒಳಪಡಿಸುತ್ತಿದೆ.
ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ.
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೦೬ ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.
ಪಿರ್ಯಾದಿದಾರರಿಗೆ ಕಳೆದುಕೊಂಡ ಹಣವು ಮರಳಿ ಸಿಗದೇ ಇರುವುದಕ್ಕೆ ಕಾರಣಗಳು. ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USಆಖಿ ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ. ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.
ಬ್ಯಾಂಕ್ ಖಾತೆ ನೀಡುವರೇ ಎಚ್ಚರ
ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ಹೂಡಿಕೆದಾರರೇ ಎಚ್ಚರ
ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ.
ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
ಸೈಬರ್ ವಂಚನೆಗೆ ಪರಿಹಾರಗಳು
ವಂಚನೆಯಾದ ಒಂದು ಗಂಟೆಯ ಒಳಗೆ ೧೯೩೦ ಗೆ ಕರೆ ಮಾಡುವುದು ಹಾಗೂ ಹತ್ತಿರದ ಪೊಲೀಸ್ ಠಾಣೆಗೆ ತಕ್ಷಣವೇ ದೂರು ಸಲ್ಲಿಸುವುದು.
ಆನ್ ಲೈನ್ ಗೇಮ್, ನಕಲಿ ಲೋನ್ ಆ?ಯಪ್, ನಕಲಿ ಪಾರ್ಟ ಟೈಮ್ ಜಾಬ್, ನಕಲಿ ಜಾಬ್ ಆಫರ್, ಗಳಿಂದ ದೂರ ಇರುವುದು.
ಂPಏ ಫೈಲ್ ಮತ್ತು ಲಿಂಕ್ ಗಳ ಬಗ್ಗೆ ಜಾಗ್ರತೆಯಿಂದ ಇರುವುದು.
ಸಾಮಾಜಿಕ ಜಾಲತಾಣಗಳಲ್ಲಿ ಬರುವ ಜಾಹೀರಾತುಗಳು, ಆಕರ್ಷಿಕ ಹೂಡಿಕೆಗಖ ಬಗ್ಗೆ ಜಾಗ್ರೂತರಾಗಿರವುದು.
ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಪ್ರೇಮ, ಗೆಳೆತನದ ಮೂಲಕ ಬ್ಯಾಂಕ್ ಖಾತೆಗಳನ್ನು ಮತ್ತು ಸಿಮ್ ಗಳನ್ನು ನೀಡುವುದು, ನಿಮ್ಮ ಅರೆ ನಗ್ನ, ಮತ್ತು ನಗ್ನ ಚಿತ್ರಗಳನ್ನು ಹಂಚಿಕೊಳ್ಳುವುದು, ಗಿಫ್ಟ್ ಕಳುಹಿಸುವುದಾಗಿ ವಂಚನಗೆ ಒಳಗಾಗಿ ಹಣವನ್ನು ಕಳುಹಿಸುವುದರಿಂದ ದೂರವಿರಿ.
ವಿಡೀಯೋ ಕಾಲ್ ಮೂಲಕ CBI, POLICE, JUDGES, CUSTOMS, SEBI, TRAI, ಮುಂತಾದ ಇಲಾಖೆಗಳನ್ನು ಬಳಸಿಕೊಳ್ಳುವ ನಕಲಿ ಅಧಿಕಾರಿಗಳಂತೆ ನಟಿಸಿ, ನಿಮಗೆ ದಸ್ತಗಿರಿ ಬೆದರಿಕೆ ನೀಡಿ ಹಣವನ್ನು ಲೂಟಿ ಮಾಡುವ ವ್ಯಕ್ತಿಗಳಿಂದ ದೂರವಿರಿ. ಯಾವುದೇ ವಿಡೀಯೋ ಕಾಲ್ ಮೂಲಕ ದಸ್ತಗಿರಿ ಮಾಡುವ ಕ್ರಮವನ್ನು ಯಾವ ಇಲಾಖೆಯೂ ಅನುಸರಿಸುತ್ತಿಲ್ಲ. ಹಾಗೂ ಭಾರತೀಯ ಕಾನೂನಿನಲ್ಲಿ ಇರುವುದಿಲ್ಲ. ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡುವುದು.
ಆನ್ ಲೈನ್ ಮೂಲಕ ಹೋಟೆಲ್, ಕ್ಯಾಬ್, ಫ್ಲೈಟ್ಸ್ ಬುಕ್ಕಿಂಗ್ ಮಾಡುವಾಗ ಎಚ್ಚರದಿಂದರಬೇಕು.
ಗೂಗಲ್ ನಲ್ಲಿ ಸಿಗುವಂತಹ ಯಾವುದೇ ಕಸ್ಟಮರ್ ಕೇರ್ ಗಳ ಬಗ್ಗೆ ಎಚ್ಚರದಿಂದರಬೇಕು ಹಾಗೂ ಯಾವುದೇ ಓಟಿಪಿಗಳನ್ನು ಶೇರ್ ಮಾಡದೇ ಇರುವುದು.

ದಸ್ತಗಿರಿಯಾದ ಆರೋಪಿತಗಳು
೧. ಮಕವನ್ ವಿಕ್ರಂ (೨೫), ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (೨೧), ಪುಪ್ಲ ಶಿವ ಕುಮಾರ್ ರಾವ್ (೩೨), ಗೌರವ್ ಪಾಂಡೆ (೨೪), ಹರ್ಷ್ ಮಿಸ್ರಾ (೨೨), ರಾಜೇಶ್ ಮಂಡನ್ (೩೦) , ಮೊಹಮ್ಮದ್ ಆಕೀಬ್ ಅಲಿ (೨೭), ರಾಜೀವ್ ರಂಜನ್ ಕುಮಾರ್ (೩೦), ಮಿಥುನ್ ಕುಮಾರ್ ಮಂಗರಾಜ್ (೩೮), ನೌಶಾದ್ ಅಲಿ (೩೪), . ಓಂ ಪ್ರಕಾಶ್ ಯಾಧವ್ (೩೭)
ವಶಪಡಿಸಿಕೊಂಡ ಸೊತ್ತುಗಳು
ಲ್ಯಾಪ್ ಟಾಪ್ -೧, ಮೊಬೈಲ್ ಪೋನ್ ಗಳು-೨೧ ,ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – ೨೦, ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು -೨೦