ನ.೧೯ ಕ್ಕೆ ಅಟಲ್ ವಿರಾಸತ್: ಪೂರ್ವಬಾವಿ ಸಭೆ

????????????

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿಯ ಅಂಗವಾಗಿ ನ.೧೯ ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆ ಶನಿವಾರ ನಡೆಯಿತು.
ಸಭೆಯಲ್ಲಿ ಕಾರ್ಯಕ್ರಮದ ಒಟ್ಟು ರೂಪುರೇಷೆಯನ್ನು ತಿಳಿಸಲಾಯಿತು. ಅಪ್ರತಿಮ ಸಾಧಕ, ದೇಶದ ಅಮೂಲಾಗ್ ಅಭಿವೃದ್ಧಿಯ ಹರಿಕಾರ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಪುತ್ತೂರಿನಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಅವರಿಗೆ ಗೌರವ ಸಲ್ಲಿಸಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಸಹಿತ ಜಿಲ್ಲಾ ಮಟ್ಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.