ನ.೨೮ ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಪೂರ್ವಭಾವಿ ಸಭೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.೨೮ ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ ? ಗೀತೋತ್ಸವ” ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ಮಠದ ಗೀತಾಮಂದಿರದಲ್ಲಿ ಇಲಾಖಾಧಿಕಾರಿಗಳ ಹಾಗೂ ಪ್ರಮುಖರ ಸಭೆ ಜರಗುತು.
ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದು ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸುಪ್ರಸಾದ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.