Home ಜಿಲ್ಲೆ ಮಂಗಳೂರು ಪಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿತರಣೆ, ಅಪ್ಪಕಜ್ಜಾಯ ಸೇವೆ

ಪಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿತರಣೆ, ಅಪ್ಪಕಜ್ಜಾಯ ಸೇವೆ

ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶ್ ಚತುರ್ಥಿ ಪ್ರಯುಕ್ತ ಮುಂಜಾನೆ ಗಣಹೋಮ, ಅಪ್ಪಕಜ್ಜಾಯ ಸೇವೆ ಭಕ್ತಾದಿಗಳಿಗೆ ಕದಿರು ವಿತರಣೆ ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು , ಭಕ್ತಾದಿಗಳು ಉಪಸ್ಥಿತರಿದ್ದರು. ಸೀಮೆಯ ಸುಮಾರು ೨೦೦೦ ಮನೆಗೆ, ೭೫ ದೈವಸ್ಥಾನ, ದೇವಸ್ಥಾನಗಳಿಗೆ ಕದಿರು ವಿತರಣೆ ಮಾಡಲಾಯಿತು. ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.