Home ಜಿಲ್ಲೆ ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ

ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ

ಸಂಜೆವಾಣಿ ವಾರ್ತೆ

ಹೊಸಪೇಟೆ.ಜು.5 ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಬಿಜೆಪಿ ಒಬಿಸಿ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಕರೆ ನೀಡಿದರು.

ಸ್ಥಳೀಯ ಬಿಜೆಪಿ ಕಛೇರಿಯಲ್ಲಿ ಶನಿವಾರ ಜರುಗಿದ ಸಂಘಟನಾ ಸಭೆ ಹಾಗೂ ಬಿಎಲ್-2 ಗಳ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್ ಮಾತನಾಡಿ, ಪಕ್ಷ ಸಂಘಟನೆ ಹಾಗೂ ಎಸ್.ಐ.ಆರ್ ಪ್ರಕ್ರಿಯೆ ಸಂದರ್ಭದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಬಿಎಲ್-2 ಗಳು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ನಗರಸಭೆ ಸದಸ್ಯ ಕಿರಣ್ ಶಂಕ್ರಿ, ಮುಖಂಡರಾದ ಶಂಕರ್ ಮೇಟಿ, ಆರ್. ಕೊಟ್ರೇಶ್, ಕಾಸಟ್ಟಿ ಉಮಾಪತಿ, ಎನ್.ಎಸ್.ರೇವಣ್ಣ ಸಿದ್ಧಪ್ಪ, ಶ್ರೀನಿವಾಸ್, ಮಂಡಲ ಪ್ರಧಾನ ಕಾರ್ಯದರ್ಶಿ ಮಧುರಚನ್ನ ಶಾಸ್ತ್ರಿ ಹಿರೇಮಠ್, ಹೆಚ್.ನಟರಾಜ್, ಆರ್.ಕೆ. ನಾಗರಾಜ, ಮಹಿಳಾ ಮೋರ್ಚಾ ಅಧ್ಯಕ್ಷೆ ಎಂ.ಬಿ.ಉಮಾದೇವಿ ಸೇರಿದಂತೆ ವಿವಿಧ ಮೋರ್ಚಾ, ನಗರ ಮಹಾಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಮಹಿಳಾ ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಮುಖಂಡರು, ಬೂತ್ ಅಧ್ಯಕ್ಷರು   ಬಿ.ಎಲ್.-2, ಗಳು ಭಾಗವಹಿಸಿದ್ದರು.