
ಮಂಗಳೂರು- ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ರಸ್ತೆಯಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಘನ ಸರಕು ವಾಹನಗಳು ಹಾಗೂ ಇತರ ವಾಹನಗಳು ಸಂಚರಿಸುತ್ತಿರುವುದರಿಂದ ಹೆಚ್ಚಾಗಿ ವಾಹನ ದಟ್ಟಣೆಯಿಂದ ಕೂಡಿದ ರಸ್ತೆಯಾಗಿರುತ್ತದೆ. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೃಹತ್ ಕೈಗಾರಿಕಾ ಕಂಪೆನಿಗಳಿದ್ದು, ಈ ಕಂಪೆನಿಗಳಿಗೆ ಸರಕು ವಸ್ತುಗಳನ್ನು ಸಾಗಾಟ ಮಾಡಲು ಬೃಹತ್ ಗಾತ್ರದ ಹೆಚ್ಚಿನ ಸಂಖ್ಯೆಯಲ್ಲಿ ಘನ ವಾಹನಗಳ ಓಡಾಟವಿರುತ್ತದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಪಾದಚಾರಿಗಳು ನಡೆದಾಡಲು ಹಾಗೂ ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ೬೬ ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿ??ಧಿಸಿ ”ನೋ ಪಾಕಿರ್ಂಗ್ ವಲಯ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.


























