ಸಂಜೆವಾಣಿ ವಾರ್ತೆ
ಬಳ್ಳಾರಿ, ಅ.23: ಬಳ್ಳಾರಿ-ವಿಜಯನಗರ ಜಿಲ್ಲೆಯಗಳ ಸರಕಾರಿ ಮತ್ತು ಖಾಸಗಿಯ ಪದವಿ ಕಾಲೇಜ್ ನ 70, ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸುವುದು ಆಯಾ ಕಾಲೇಜಿನ ಬೇಜವಾಬ್ದಾರಿಯಾಗಿರುತ್ತದೆ. ಪ್ರಿನ್ಸಿಪಾಲರು ಅಂಕಪಟ್ಟಿ ತೆಗೆದುಕೊಂಡು ಹೋಗಿ ವಿತರಿಸಲಾರದೆ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಆಯಾ ಕಾಲೇಜಿನ ಪ್ರಿನ್ಸಿಪಾಲರ ಮೇಲೆ ಕೂಡಲೇ ಕಟ್ಟುನಿಟ್ಟಿನ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ. ಈ ಕುರಿತು ವಿ.ಎಸ್.ಕೆ ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದೆ.
ಒಂದು ವೇಳೆ ತಾವುಗಳು ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಗಳನ್ನು ಒದಗಿಸಲಾರದೆ ನಿರ್ಲಕ್ಷ ವಹಿಸಿದ ಪಕ್ಷದಲ್ಲಿ ನಿಮ್ಮ ವಿಶ್ವವಿದ್ಯಾಲಯದ ಕಚೇರಿ ಮುಂದೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮನವಿಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಶಂಕರ್ ನಂದಿಹಾಳ, ಜಿಲ್ಲಾ ಕಾರ್ಯಾಧ್ಯಕ್ಷರು ಸಿ ಹನುಮೇಶ್ ಕಟ್ಟಿಮನಿ, ಛಲವಾದಿ ಮಹಾಸಭಾ ಜಿಲ್ಲಾ ಅಧ್ಯಕ್ಷರು ಸಿ ಶಿವಕುಮಾರ, ಛಲವಾದಿ ಮಹಾಸಭಾ ಜಿಲ್ಲಾ ಉಪಾಧ್ಯಕ್ಷರು ಮಾನಯ್ಯ ಬಿ ಗೋನಾಳ್ ಉಪಸ್ಥಿತರಿದ್ದರು.























