Home ಜಿಲ್ಲೆ ಮಂಗಳೂರು ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಸುಳ್ಯ:ಬೆಳ್ಳಾರೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ಶನಿವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಾಲಸುಬ್ರಮಣ್ಯ ಪಿ ಎಸ್ ಮಾತನಾಡಿ “ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಯುವ ಜನರ ಸದೃಢತೆಯು ದೇಶದ ದೃಢತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಹಾಗೂ ಕ್ರೀಡಾ ವಿಭಾಗದ ಸಂಚಾಲಕ ರಾಮು ಆರ್ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಪ್ರಾಸ್ತವಿಕ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲಕ ಗಿರೀಶ ಸಿ ಆರ್ ಉಪನ್ಯಾಸ ನೀಡಿದರು. ಸ್ನಾತಕ ವಿಭಾಗದ ಕ್ರೀಡಾ ಕಾರ್ಯದರ್ಶಿ ಆರ್ ಶ್ಯಾಮ್ ಗಣೇಶ್ ಭಟ್ ಉಪಸ್ಥಿತರಿದ್ದರು.
ಆಜ್ಞಾಶ್ರೀ ರೈ ಡಿ ಮತ್ತು ತಂಡದವರು ಪ್ರಾರ್ಥಿಸಿದರು. ಮೋಕ್ಷ ಕೆ ವಿ ಸ್ವಾಗತಿಸಿದರು. ಸ್ನೇಹ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ ನಡೆಯಿತು.