Home ಜಿಲ್ಲೆ ಮಂಗಳೂರು ಫೆಬ್ರವರಿ ೨೬ ರಿಂದ ವಾಹನ ಸಂಚಾರ ಸಮೀಕ್ಷೆ

ಫೆಬ್ರವರಿ ೨೬ ರಿಂದ ವಾಹನ ಸಂಚಾರ ಸಮೀಕ್ಷೆ

ಮಂಗಳೂರು-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ೨೦೨೬ ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ ೨೬ ರ ಬೆಳಿಗ್ಗೆ ೬ ಗಂಟೆಯಿಂದ ಫೆಬ್ರವರಿ ೨೮ ರ ಬೆಳಿಗ್ಗೆ ೬ ಗಂಟೆಯವರೆಗೆ ೨ ದಿನಗಳ ಕಾಲ ನಡೆಸಲಾಗುತ್ತದೆ.
ದ.ಕ. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖಾ ವತಿಯಿಂದ ಈ ಸಮೀಕ್ಷೆಗೆ ಸುಮಾರು ೧೩೯ ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ವಾಹನ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಮಂಗಳೂರು ವಿಭಾಗದ
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.