Home ಜಿಲ್ಲೆ ಮಂಗಳೂರು ಫೆ.೧೧; ಕನ್ನಡ ಶಾಲೆ ಉಳಿಸಿ-ಬೆಳೆಸಿ ಅಭಿಯಾನ ‘ರಾಜ್ಯಸಮಾವೇಶ’

ಫೆ.೧೧; ಕನ್ನಡ ಶಾಲೆ ಉಳಿಸಿ-ಬೆಳೆಸಿ ಅಭಿಯಾನ ‘ರಾಜ್ಯಸಮಾವೇಶ’

filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 31;

ಪುತ್ತೂರು: ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ವತಿಯಿಂದ ಕನ್ನಡ ಮನಸ್ಸುಗಳ ಸಂಗಮ ರಾಜ್ಯಮಟ್ಟದ ಸಮಾವೇಶ ಮಂಗಳೂರಿನ ಪುರಭವನದಲ್ಲಿ ಫೆ.೧೧ರಂದು ಸಂಜೆ ೨ಗಂಟೆಗೆ ನಡೆಯಲಿದೆ ಎಂದು ಅಭಿಯಾನದ ತಾಲೂಕು ಅಧ್ಯಕ್ಷೆ ನಿವೃತ್ತ ಶಿಕ್ಷಕಿ ವೇದಾವತಿ ಮತ್ತು ಗೌರವಾಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಕಳೆದ ೧೨ ವರ್ಷಗಳಿಂದ ಕನ್ನಡ ಶಾಲೆಗಳನ್ನು ಉಳಿಸುವ ಹಾಗೂ ಕನ್ನಡದ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ಈ ಅಭಿಯಾನದ ವತಿಯಿಂದ ೭೫ ಶಾಲೆಗಳಿಗೆ ಜಾರುಬಂಡಿ ಸಹಿತ ಕ್ರೀಡಾ ಸಾಮಾಗ್ರಿಗಳನ್ನು ನೀಡಿ ಪ್ರೋತ್ಸಾಹಿಸಲಾಗಿದೆ. ಹಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಕನ್ನಡ ಶಾಲೆಗಳ ಅಗತ್ಯತೆಯನ್ನು ಜನತೆಗೆ ಮನವರಿಕೆ ಮಾಡುವ ಕೆಲಸ ನಡೆಸಲಾಗಿದೆ. ಕನ್ನಡ ಉಳಿಸುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು, ಇದಕ್ಕೆ ಪರಿಹಾರೋಪಾಯಗಳನ್ನು ರಾಜ್ಯಾಡಳಿತಕ್ಕೆ ನೀಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಜತೆಗೂ ವಿಚಾರವಿಮರ್ಶೆ ನಡೆಸಲಾಗಿದೆ. ಕನ್ನಡ ಶಾಲೆಗಳಲ್ಲಿ ತರಗತಿವಾರು ಶಿಕ್ಷಕರ ನೇಮಕ, ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ರಾಜ್ಯ ಸರ್ಕಾರವನ್ನು ಆಗ್ರಹಿಸುವ ಕೆಲಸ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಪುರಭವನದಲ್ಲಿ ನಡೆಯುವ ಈ ಅಭಿಯಾನದ ಸಂಭ್ರಮ ಕಾರ್ಯಕ್ರಮದಲ್ಲಿ ೩೧ ಜಿಲ್ಲೆಗಳ ಜಿಲ್ಲಾಧ್ಯಕ್ಷ ಪದಗ್ರಹಣ, ಶಿಕ್ಷಕರಿಗೆ ಗುರುವಂದನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಅಂಗವೈಕಲ್ಯತೆಯ ವಿದ್ಯಾರ್ಥಿಗಳಿಗೆ ವೀಲ್‌ಚೇರ್, ಶ್ರವಣಯಂತ್ರ ವಿತರಣೆ ಹಾಗೂ ಸಾಧಕರಿಗೆ ಕನ್ನಡರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಅಭಿಯಾನದ ಕ್ರಾಂತಿಗೀತೆಗಳಿಗೆ ಹೆಜ್ಜೆ ಹಾಕುವ ಕಲಾವೈಭವವನ್ನೂ ಅಳವಡಿಸಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪೀಕರ್ ಯು.ಟಿ.ಖಾದರ್ ವಹಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿರೋಧಪಕ್ಷದ ನಾಯಕ ಆರ್.ಅಶೋಕ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಸುರೇಶ್ ಕುಮಾರ್, ವೇದವ್ಯಾಸ ಕಾಮತ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಎಸ್‌ಡಿಎಂಸಿ ಸಹಕಾರ ಅಗತ್ಯ
ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹಲವು ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದೇವೆ. ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಪೋಷಕರ ಮನಪರಿವರ್ತನೆ ಆಗಬೇಕಾಗಿದೆ. ಮುಖ್ಯವಾಗಿ ಶಾಲಾ ಎಸ್‌ಡಿಎಂಸಿ ಸಹಕಾರ ಅತ್ಯಂತ ಅಗತ್ಯವಾಗಿದೆ. ಗ್ರಾಮದ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರತೀ ಗ್ರಾಮದಲ್ಲಿಯೂ ಜಾಗೃತಿ ಮೂಡಿಸುವ ಕೆಲಸ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಗೌರವ ಸಲಹೆಗಾರ ನಾರಾಯಣ ರೈ ಕುಕ್ಕುವಳ್ಳಿ, ಮಾಧ್ಯಮ ವಕ್ತಾರ ಪತ್ರಕರ್ತ ಯೂಸುಫ್ ರೆಂಜಲಾಡಿ, ಖಜಾಂಚಿ ಅನುಸೂಯ ಉಪಸ್ಥಿತರಿದ್ದರು.