ಬೊಲೆರೋ ಕಾರು ಅಪಘಾತ ಇಬ್ಬರು ಸಾವು

ಬೆಂಗಳೂರು,ಡಿ.೨೦-ಬೊಲೆರೋ ಕಾರು ಹಾಗೂ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.


ಜಕ್ಕೇನೆಹಳ್ಳಿಯ ಅಶೋಕ್(೨೫) ಆಂಧ್ರಪ್ರದೇಶ ಸಂಜೀವರಾಯನಪಲ್ಲಿಯ ನಾಗರಾಜಪ್ಪ ಮೃತಪಟ್ಟವರು. ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಂಚೆನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.