Home Uncategorized ಬಳ್ಳಾರಿಯಲ್ಲಿ ಬೃಹತ್ ಉದ್ಯೋಗ ನೂರಾರು ಆಕಾಂಕ್ಷಿಗಳು ಭಾಗಿ

ಬಳ್ಳಾರಿಯಲ್ಲಿ ಬೃಹತ್ ಉದ್ಯೋಗ ನೂರಾರು ಆಕಾಂಕ್ಷಿಗಳು ಭಾಗಿ

Oplus_16908288

(ಸಂಜೆವಾಣಿ ಪ್ರತಿನಿಧಿಯಿಂದ )

ಬಳ್ಳಾರಿ,ಮಾ.04: ನಗರದ ಸರಳಾದೇವಿ ಕಾಲೇಜಿನಲ್ಲಿ ಇಂದು ಬೃಹತ್ ಉದ್ಯೋಗ ಮೇಳವನ್ನು ಡಿಡಿಯು-ಜಿಕೆವೈ ಯೋಜನೆಯಡಿ ಜಿಲ್ಲಾ ಆಡಳಿತ ಹಮ್ಮಿಕೊಂಡಿತ್ತು. ಈ ಮೇಳದಲ್ಲಿ ಸುಮಾರು 60ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, 6 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಮೇಳಕ್ಕೆ ಚಾಲನೆ ನೀಡಿದ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಒಳಮೀಸಲಾತಿ ಜಾರಿ ಅನುಷ್ಠಾನದಿಂದ ಹುದ್ದೆ ಭರ್ತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟದ ನಿರ್ಧಾರದಂತೆ ಸದ್ಯದಲ್ಲೇ 52 ಸಾವಿರಕ್ಕೂ ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ

ಉದ್ಯೋಗ ಸಿಗದ ಪದವೀಧರರಿಗೆ ಆಸರೆಯಾಗಲು ಸರ್ಕಾರ ‘ಯುವನಿಧಿ’ ಯೋಜನೆಯಡಿ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದರು.

ಮೇಯರ್ ಪಿ.ಗಾದೆಪ್ಪ ಮಾತನಾಡಿ, ಬಳ್ಳಾರಿ ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತಿ ಹೆಚ್ಚು ಕೈಗಾರಿಕೆ ಕಂಪನಿಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಈ ಮಹತ್ವದ ಕಾರ್ಯ ಶ್ಲಾಘನೀಯವಾಗಿದೆಂದರು.

ಬಳ್ಳಾರಿ ವಲಯ ಪೊಲೀಸ್ ಉಪಮಹಾನಿರೀಕ್ಷಕ ಡಾ.ಪಿ.ಎಸ್. ಹರ್ಷ ಮಾತನಾಡಿ, ಯುವಪೀಳಿಗೆಗೆ ಅಗತ್ಯವಾದುದು ಉದ್ಯೋಗಾವಕಾಶ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಮೇಳಗಳು ಅತಿ ಅವಶ್ಯಕವಾಗಿವೆಂದರು

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅಧ್ಯಕ್ಷತೆ ವಹಿಸಿ. ಕೇವಲ ಪುಸ್ತಕದ ಜ್ಞಾನವಿದ್ದರೆ ಸಾಲದು. ಕಂಪ್ಯೂಟರ್ ಲ್ಯಾಂಗ್ವೇಜ್ಗಳಾದ ಪೈಥಾನ್, ಜಾವಾ, ಡೇಟಾ ಸೈನ್ಸ್ ಹಾಗೂ ಎಐ-ಎಂಎಲ್ ನಂತಹ ವಿಶೇಷ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಮುಖ್ಯವಾಗಿ ಅಭ್ಯರ್ಥಿಗಳಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ ಇರುವುದು ಅತಿ ಮುಖ್ಯ. ಆಗ ಮಾತ್ರ ಸಂದರ್ಶನಗಳಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

ಈ ವೇಳೆ ವಿಟಿಎಸ್ ಹೆಚ್ಆರ್ ಸರ್ವೀಸಸ್ ನಲ್ಲಿ ಉದ್ಯೋಗ ಪಡೆದ ಆಕಾಂಕ್ಷಿ ಬಳ್ಳಾರಿಯ ಜಿ.ಎಸ್. ಹರ್ಷ ಅವರಿಗೆ ಸ್ಥಳದಲ್ಲಿಯೇ ಗಣ್ಯರು ನೇಮಕಾತಿ ಆದೇಶ ಪತ್ರ ವಿತರಿಸಿದರು.

ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನೋಂದಾಯಿಸಿಕೊಳ್ಳಲು ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿತ್ತು. ಕಾಲೇಜಿನ ವಿವಿಧ ಕೊಠಡಿಗಳಲ್ಲಿ ವಿವಿಧ ಕಂಪನಿಗಳ ಉದ್ಯೋಗದಾತರು ಅಭ್ಯರ್ಥಿಗಳನ್ನು ಸಂದರ್ಶಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಸರಳಾದೇವಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಹ್ಲಾದ್ ಜೋಶಿ, ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಅವ್ವಾರು ಮಂಜುನಾಥ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ರಿ ಪಿ.ಎಸ್.ಹಟ್ಟಪ್ಪ ಮೊದಲಾದವರು ಇದ್ದರು.