
ಸಂಜೆವಾಣಿ ವಾರ್ತೆ
ಹನೂರು: ಜ.27:- ವಿವಿಧ ಭಾಷೆ, ಸಂಸ್ಕೃತಿ, ಜಾತಿ ಧರ್ಮಗಳಿಂದ ಕೂಡಿರುವ ಬಹುತ್ವ ಭಾರತದ ಆಡಳಿತ ನಿರ್ವಹಣೆ ಮತ್ತು ಅಭಿವೃದ್ಧಿಗೆ ಅಗತ್ಯವಾಗಿರುವ ಸಂವಿಧಾನವನ್ನು ಬಾಬಾ ಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್ ರವರು ರಚಿಸಿಕೊಟ್ಟಿದ್ದಾರೆ. ಇದು ಮಾದರಿ ಸಂವಿಧಾನವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಅವರು ತಿಳಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 77 ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಬಾ ಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್ ರಚಿತ ಭಾರತ ಸಂವಿಧಾನವು ವಿಶ್ವಕ್ಕೆ ಮಾದರಿ ಸಂವಿಧಾನವಾಗಿದೆ. ಸಂವಿಧಾನದ ಆಶಯಗಳು ಹಾಗೂ ತತ್ವ ಸಿದ್ಧಾಂತಗಳನ್ನು ಭಾರತದ ಪ್ರಜೆಗಳಾದ ನಾವೆಲ್ಲರೂ ಗೌರವಿಸಬೇಕು. ಅಂಬೇಡ್ಕರ್ ರವರ ಆಶಯದಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.
ಈ ನಿಟ್ಟಿನಲ್ಲಿ ನಮ್ಮ ತಾಲೂಕಿನ ಎಲ್ಲಾ ಮಕ್ಕಳು ಉತ್ತಮ ಶಿಕ್ಷಣ ಪಡೆದು ಅಧಿಕಾರಿಗಳಾಗಿ, ದೇಶ ಕಾಯುವ ಯೋಧರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಮಕ್ಕಳು ಪೆÇೀಷಕರ ಕನಸನ್ನು ನನಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ.ಮಾತು ಹೇಳಿದರು.
ತಾಲೂಕಿನ ಮಂಗಲ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಸತೀಶ್ ಮುಖ್ಯ ಭಾಷಣಕಾರರಾಗಿ ಆಗಮಿಸಿ ಗಣರಾಜ್ಯೋತ್ಸವ ಮತ್ತು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟರು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ಆಕರ್ಷಕ ನೃತ್ಯ ಮಾಡಿ ಸಾರ್ವಜನಿಕರಿಗೆ ಮನರಂಜನೆ ಜೊತೆಗೆ ದೇಶಾಭಿಮಾನ ಮೂಡುವಂತೆ ಮಾಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪಾಳ್ಯ ರಾಚಪ್ಪ, ತಹಶೀಲ್ದಾರ್ ಚೈತ್ರ ಕೆ.ಎನ್., ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಇ.ಒ. ಉಮೇಶ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರೇಖಾ, ಪೆÇಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






























