
ಸಮಸ್ತೀಪುರ,ಸೆ.24:– ಬಿಹಾರದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಸರಣಿ ಘಟನೆಗಳು ಜನರನ್ನು ಬೆಚ್ಚಿಬೀಳಿಸಿದ್ದು, ಜಮುಯಿ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಸಮಸ್ತೀಪುರದಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಾರ್ವಜನಿಕ ರಸ್ತೆಯಲ್ಲೇ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯಾದ್ಯಂತ ತೀವ್ರ ಆಕ್ರೋಶದ ಅಲೆಯನ್ನೇ ಎಬ್ಬಿಸಿದೆ.
ಈ ದುರ್ಘಟನೆಯು ಸಮಸ್ತೀಪುರದ ಕರ್ಪೂರಿಗ್ರಾಮ ಪೆÇಲೀಸ್ ಠಾಣೆ ವ್ಯಾಪ್ತಿಯ ಜಗತ್ಸಿಂಗ್ಪುರ ಗ್ರಾಮದ ಹತ್ತಿರದ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಬಾಲಕಿಯು ತನ್ನ ಸ್ನೇಹಿತನೊಂದಿಗೆ ರಸ್ತೆಬದಿಯಲ್ಲಿ ಛಾಯಾಚಿತ್ರ ತೆಗೆದುಕೊಳ್ಳುತ್ತಿದ್ದಾಗ, ಅಲ್ಲಿಗೆ ಬಂದ ಕಿಡಿಗೇಡಿಗಳ ಗುಂಪೆÇಂದು ಅವರಿಬ್ಬರನ್ನು ಮುತ್ತಿಗೆ ಹಾಕಿದೆ. ಬಾಲಕಿಯು ಎಷ್ಟೇ ಬೇಡಿಕೊಂಡರೂ ಆಕೆಗೆ ರಸ್ತೆಯಲ್ಲೇ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ್ದು, ಆಕೆಯ ಕೈಹಿಡಿದು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾರೆ.
ವೈರಲ್ ಆದ ಐವತ್ತಾರು ಸೆಕೆಂಡುಗಳ ವಿಡಿಯೋ ತುಣುಕನ್ನು ಗಮನಿಸಿದ ಪೆÇಲೀಸರು ತಕ್ಷಣವೇ ತನಿಖೆ ಆರಂಭಿಸಿ, ಈ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಈ ರೀತಿಯ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೆÇಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಭರವಸೆ ನೀಡಿದ್ದಾರೆ.























