
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.24: ನಗರದ ಬಳ್ಳಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದ ಕೈದಿ ನಿನ್ನೆ ಸಂಜೆ ಪರಾರಿಯಾಗಿರುವ ಘಟನೆ ನಡೆದಿದೆ.
ಹರಪನಹಳ್ಳಿ ಮೂಲದ ಆರೋಪಿ ಅಣ್ಣಪ್ಪ ನಿನ್ನೆ ಮಧ್ಯಾಹ್ನ ಜೈಲಿನೊಳಗೆ ಮರದ ಮೇಲಿಂದ ಬಿದ್ದು ಗಾಯ ಮಾಡಿಕೊಂಡಿದ್ದನು. ಕೂಡಲೇ ಆತನನ್ನು ಬಳ್ಳಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಪಡೆದು ಬಾತ್ ರೂಂಗೆ ಹೋಗಿದ್ದಾನೆ. ಅಲ್ಲಿ
ಬಾತ್ ರೂಂ ಕಿಟಕಿ ಗ್ಲಾಸ್ ಒಡೆದು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























