
ಉಡುಪಿ-ಬಿಜೆಪಿಯವರಲ್ಲಿರುವ ವಾಷಿಂಗ್ ಮೆಷಿನ್ನಲ್ಲಿ ನಿರ್ಮಾ ಪೌಡರ್ ಹಾಕಿ ತೊಳೆದರೆ ಭ್ರಷ್ಚಾಚಾರಿಗಳು ಪ್ರಾಮಾಣಿಕರಾಗುತ್ತದೆ. ಹೀಗೆ ೨೫ ರಾಜಕಾರಣಿಗಳನ್ನು ಬಿಜೆಪಿಯವರು ಈ ರೀತಿ ಮಾಡಿದ್ದಾರೆ ಎಂದು ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದರು.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಜಿತ್ ಪವರ್ ಮೇಲೆ ೬೦ಸಾವಿರ ಕೋಟಿ ಆರೋಪ ಇತ್ತು. ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಅಸ್ಸಾಂ ಮುಖ್ಯಮಂತ್ರಿ ಬಿಶ್ವಾಸ್ ಅವರ ಮೇಲೂ ಆರೋಪ ಇತ್ತು. ಇಬ್ಬರೂ ಕೂಡ ಬಿಜೆಪಿಗೆ ಹಣ ಕೊಟ್ಟು ಸೇರ್ಪಡೆಯಾದರು. ಪಪ್ಪಿ ಬಿಹಾರ ಚುನಾವಣೆಗೆ ದುಡ್ಡು ಕೊಟ್ಟಿಲ್ಲ. ಯಾರು ದುಡ್ಡು ಕೊಡುತ್ತಾರೆಯೋ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಇಡೀ ಮಹಾರಾಷ್ಟ್ರ ಚುನಾವಣೆಗೆ ಅಜಿತ್ ಪವಾರ್ ಹಣ ಕೊಟ್ಟಿದ್ದಾರೆ. ಬಿಜೆಪಿಯವರೇ ಅಜಿತ್ ಪವಾರ್ ವಿರುದ್ಧ ಆರೋಪಗಳನ್ನು ಮಾಡಿದ್ದರು ಎಂದರು.
ಭ್ರಷ್ಟಾಚಾರ ರಾಂಕಿಂಗ್ನಲ್ಲಿ ದೇಶ ಯಾವ ಸ್ಥಾನದಲ್ಲಿದೆ ನೋಡಿ. ಹಸಿವಿನ ಸೂಚ್ಯಂಕ, ಬಡತನದ ಸೂಚ್ಯಂಕ, ವಾಕ್ ಸ್ವಾತಂತ್ರ?ಯ, ಜಿಡಿಪಿ, ಪಾಸ್ ಪೋರ್ಟ್ ರಾಕಿಂಗ್ಗಳಲ್ಲಿ ಭಾರತ ಎಲ್ಲಿz?ದೇವೆ ನೋಡಿ ಎಂದು ಸಚಿವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಔತಣ ಕೂಟ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿ ವರ್ಷ ಔತಣಕೂಟ ಕರೆಯಲಾಗುತ್ತದೆ. ಇದೇನು ಹೊಸತಲ್ಲ. ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ ರಚನೆ ಆಗುವುದು ಸಹಜ ಪ್ರಕ್ರಿಯೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳು, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಬಿಗ್ಬಾಸ್ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅಲ್ಲಿ ಪರಿಸರ ಕ್ಲೀಯರೇನ್ಸ್ ಇರಲಿಲ್ಲ.ಯ ಉಪಮುಖ್ಯಮಂತ್ರಿಗಳು ಒಂದು ವ್ಯವಸ್ಥೆಗೆ ತಂದಿz?ದರೆ. ಉz?ದಶ ಪೂರ್ವಕವಾಗಿ ನಾವು ಬಿಗ್ಬಾಸ್ ನಿಲ್ಲಿಸುವ ಅವಶ್ಯಕತೆ ಇಲ್ಲ. ನೋಟಿಸುಗಳನ್ನು ಕೊಟ್ಟಿರುತ್ತಾರೆ. ಡಿಕೆಶಿ ಮುಂದಾಳತ್ವದಲ್ಲಿ ಸಮಾಧಾನ ಮಾಡಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಗಣತಿ ಶೇ.೮೦ರಷ್ಟು ಪೂರ್ಣ ಗೊಂಡಿದೆ. ಇದು ಜಾತಿ ಗಣತಿ ಅಲ್ಲ. ಸಿದ್ದರಾಮಯ್ಯ ಅಥವಾ ಸರಕಾರ ಸಮಾಜವನ್ನು ಒಡೆದಿಲ್ಲ. ಕೇಂದ್ರ ಸರಕಾರವು ಗಣತಿ ಮಾಡಲು ಹೊರಟಿದೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.೧೦ ಮೀಸಲಾತಿ ಕೊಟ್ಟಿದೆ. ಇದರ ವಿರುದ್ಧ ಯಾರಾದರೂ ಪ್ರತಿಭಟನೆ ಹೋರಾಟ ಮಾಡಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಮಹಿಳೆಯರಿಗೆ ಒಂದು ವರ್ಷದಲ್ಲಿ ೧೨ ದಿನಗಳ ಮುಟ್ಟಿನ ರಜೆ ನೀಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದ್ದು, ಇದೊಂದು ಪ್ರಗತಿಪರ ಮಸೂದೆಯಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಈ ಕುರಿತು ಸೈಕಲ್ ಮೂಲಕ ಜಾಗೃತಿ ಮೂಡಿಸುವ ಒರಿಸ್ಸಾದ ರಂಜಿತಾ ಪ್ರಿಯದರ್ಶಿನಿ, ನಮ್ಮ ಪರಿಚಯದ ಕವಿತಾ ರೆಡ್ಡಿ ಜೊತೆ ಬಂದು ನನ್ನನ್ನು ವರ್ಷದಿಂದ ಭೇಟಿಯಾಗಿದ್ದರು. ಆಗ ಅವರೇ ಈ ಬಗ್ಗೆ ಪ್ರಸ್ತಾಪ ಸಲ್ಲಿಸಿದ್ದರು. ಇದೀಗ ಕರ್ನಾಟಕ ಸರಕಾರ ಒಮ್ಮತದಿಂದ ನಿರ್ಧಾರ ಕೈಗೊಂಡು ಕಾನೂನು ರಚನೆ ಮಾಡಿದೆ ಎಂದರು.
ಇದರಿಂದ ಮಧ್ಯಮ ಬಡ ಮಾಧ್ಯಮ ವರ್ಗದ ಬಹಳಷ್ಟು ಹೆಣ್ಣು ಮಕ್ಕಳು ಹಾಗೂ ಗಾರ್ಮೆಂಟ್ ಸೇರಿದಂತೆ, ಸಣ್ಣ ಕೈಗಾರಿಕೆಗಳಲ್ಲಿ ದುಡಿಯುವ ಮಹಿಳೆಯರಿಗೆ ಅನುಕೂಲವಾಗಲಿದೆ. ಮುಟ್ಟಿನ ಸಮಸ್ಯೆ ಯಿಂದ ಅನೇಕ ಮಂದಿ ಮಹಿಳೆಯರು ಬಳಲುತ್ತಿದ್ದು, ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿತ್ತು. ಆ ಮೂಲಕ ರಾಜ್ಯಾದ್ಯಂತ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಬುದ್ಧ ಬಸವ ಅಂಬೇಡ್ಕರ್ ಸಿದ್ಧಾಂತದ ಕಾಂಗ್ರೆಸ್ ಸರಕಾರ ಈ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು

































