ಬಿಜೆಪಿಯಿಂದ ಯಡಿಯೂರಪ್ಪ ಜನ್ಮ ದಿನ ಆಚರಣೆ

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ, ಫೆ.27: ರಾಜ್ಯದ ಮಾಜಿ ಮುಖ್ಯ ಮಂತ್ರಿ, ಬಿಜೆಪಿಯ ಕೇಂದ್ರ ಸಂಸದೀಯ ಸಮಿತಿ ಸದಸ್ಯ,  ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 84 ನೇ ಜನ್ಮ ದಿನಸಚರಣೆಯನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇಂದು ನಗರದ ದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ. ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮದಿಂದ ಆಚರಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿಯ ಜಿಲ್ಲೆಯ ಹಿರಿಯ ಮುಖಂಡ ಡಾ.ಎಸ್.ಜೆ.ವಿ.ಮಹಿಪಾಲ್, ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್ ಮೊದಲಾದವರು ಮಾತನಾಡಿ, ರೈತಪರ ಹೋರಾಟಗಾರ ಯಡಿಯೂರಪ್ಪನವರು ಅವರ ಅಧಿಕಾರದಲ್ಲಿ ಕೃಷಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿದರು. 108, ಭಾಗ್ಯಲಕ್ಷಿ ಬಾಂಡ್ ಮೊದಲಾದ ಯೋಜನೆಗಳ ಮೂಲಕ ಉತ್ತಮ ಆಡಳಿತ ನೀಡಿ ಜನಮಾನಸದಲ್ಲಿ ಉಳಿದಿದ್ದಾರೆಂದರು.

ಈ ಸಂದರ್ಭದಲ್ಲಿ ಪಕ್ಷದ ನಗರ ಅಧ್ಯಕ್ಷ ವೆಂಕಟರಮಣ, ಪಾಲಿಕೆ ಸದಸ್ಯೆ ಸುರೇಖ ಮಲ್ಲನಗೌಡ, ಗಣಪಾಲ ಐನಾಥರೆಡ್ಡಿ, ಮದಿರೆ ಕುಮಾರಸ್ವಾಮಿ, ಶ್ರೀನಿವಾಸ್ ಪಾಟೀಲ್, ವಿ.ರಾಮಚಂದ್ರಯ್ಯ ಮೊದಲಾದವರು ಪಾಲ್ಗೊಂಡಿದ್ದರು.