Home ಜಿಲ್ಲೆ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಯಂತಿ

ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಯಂತಿ

Oplus_16908288

(ಸಂಜೆವಾಣಿ ಪ್ರತಿನಿಧಿಯಿಂದ)

ಬಳ್ಳಾರಿ, ಸೆ.26: ಚಿಂತಕ, ತತ್ವಜ್ಞಾನಿ ಹಾಗೂ ಸಮಾಜಮುಖಿ ನಾಯಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯನ್ನು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಿನ್ನೆ ಆಚರಿಸಲಾಯಿತು.

ಈ ವೇಳೆ ದೀನ್  ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಯಿತು. ಬಳಿಕ ಅವರ ಸ್ಮರಣಾರ್ಥ ಸಸಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ  ಮಾತನಾಡಿ, ‘ಅಂತ್ಯೋದಯ’ ಪರಿಕಲ್ಪನೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿ ಹಾಗೂ ಕಲ್ಯಾಣಕ್ಕೆ ದೀನ್ ದಯಾಳ್ ಉಪಾಧ್ಯಾಯ ಒತ್ತು ನೀಡಿದ್ದರು. ದೇಶದ ಅಭಿವೃದ್ಧಿಯ ಜೊತೆಗೆ ಸಮಾಜದ ಎಲ್ಲ ವರ್ಗಗಳ ಉನ್ನತಿಗೂ ಆದ್ಯತೆ ನೀಡಬೇಕು ಎಂಬುದು ಅವರ ಆಶಯವಾಗಿತ್ತು ಎಂದು ತಿಳಿಸಿದರು.

ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಬಿಜೆಪಿ ಸಂಘಟನೆ ಹಾಗೂ ಪಕ್ಷದ ಬೆಳವಣಿಗೆಗೆ ದೀನ್ ದಯಾಳ್ ಉಪಾಧ್ಯಾಯ ಅವರ ಕೊಡುಗೆ ಮಹತ್ವದ್ದಾಗಿದೆಂದರು

 ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ, ಎಸ್.ಮಲ್ಲನಗೌಡ,   ಮಾಜಿ ಜಿಲ್ಲಾಧ್ಯಕ್ಷ ಮುರಹರಗೌಡ, ಶಂಕ್ರಪ್ಪ ಮತ್ತಿತರರಿದ್ದರು.