
ಸಂಜೆವಾಣಿ ವಾರ್ತೆ
ಹನೂರು ಜು 4 :- ಜಿಲ್ಲಾಡಳಿತ, ಕೃಷಿ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.
ಪ್ರಗತಿ ಪರ ರೈತ ದಯಾನಂದ್ ಅವರ ಚಿಂಚಳ್ಳಿ ಗ್ರಾಮದ ಜಮೀನಿನಲ್ಲಿ ರಾಗಿ ಬಿತ್ತನೆ ಮಾಡುವ ಮೂಲಕ ಪಶುಸಂಗೋಪನೆ, ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರೊಂದಿಗೆ ಬಿತ್ತನೆ ಅಭಿಯಾನಕ್ಕೆ ಚಾಲನೆ ಕೊಟ್ಟರು. ಇದೆ ವೇಳೆ ಡೋನ್ ಮೂಲಕ ಬೆಳೆಗಳಿಗೆ ಔಷಧಿ ಸಿಂಪಡಣೆ ಕಾರ್ಯವನ್ನು ನೆರವೇರಿಸಿದರು.
ಎಕರೆ ಜಮೀನಿನಲ್ಲಿ ತರಕಾರಿ, ಕೃಷಿಹೊಂಡ, ಮೀನು, ಕುರಿ, ಕೋಳಿ ಸಾಕಾಣೆಯಂತಹ ಈ ಎಲ್ಲಾ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಕನಿಷ್ಠ 10 ಲಕ್ಷ ರೂ. ಆದಾಯ ಪಡೆಯಬಹುದಾಗಿದೆ. ಇಂತಹ ಸಮಗ್ರ ಕೃಷಿಯಿಂದ ಹಲವರು ಆರ್ಥಿಕವಾಗಿ ಸದೃಢರಾಗಿರುವ – ನಿದರ್ಶನಗಳಿವೆ ಎಂದರು.
ರಾಸಾಯನಿಕ ಗೊಬ್ಬರಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ಇದರ ಅವಲಂಬನೆ ಕಡಿಮೆಯಾಗಬೇಕಿದೆ. ಸಾವಯವ ನೈಸರ್ಗಿಕ ಕೃಷಿ ಪದ್ದತಿಗೆ ಹೆಚ್ಚಿನ ಒಲವು ತೋರಬೇಕು. ಸರ್ಕಾರವು ಇದರ ಉತ್ತೇಜನಕ್ಕೆ ಮುಂದಾಗಿದೆ. ನೀರು ವ್ಯರ್ಥ ಮಾಡದೇ ಅಗತ್ಯ ಪ್ರಮಾಣದಲ್ಲಿ ಬಳಸಿದಾಗ ಭೂಮಿಯ ಫಲವತ್ತತೆಯು ಹೆಚ್ಚಾಗಲಿದೆ.
ಸೂಕ್ಷ್ಮ ನೀರಾವರಿ ಅಳವಡಿಕೆಗೆ ಬಳಿಕ ಜಮೀನಿನ ಆವರಣ ದೊಳಗೆ ಕೃಷಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಪವರ್ ಟಿಲ್ಲರ್, ರೋಟೊವೇಟರ್, ಜಾಫ್ ಕಟರ್, ಪವರ್ ವೀಡರ್, ಎಣ್ಣೆ ಗಾಣ, ಇನ್ನಿತರ ಕೃಷಿ ಸಂಬಂಧಿ ಯಂತ್ರೋಪಕರಣಗಳನ್ನು ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ವೆಂಕಟೇಶ್, ಶಾಸಕ ಎಂ.ಆರ್. ಮಂಜುನಾಥ್ ವಿತರಿಸಿದರು.
ನಂತರ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಸಮಗ್ರ ಕೃಷಿಯಿಂದ ಹೆಚ್ಚಿನ ಆದಾಯ ಬರಲಿದೆ.
ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಿಂದ ಚಾಲನೆ
ಸೂಕ್ಷ್ಮ ನೀರಾವರಿ ಅಳವಡಿಕೆಗೆ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ ಕೃಷಿ ಸಚಿವರು ತಿಳಿಸಿದರು. ಹವಾಮಾನ ವೈಪರಿತ್ಯ ಇನ್ನಿತರ ಸಂದರ್ಭಗಳಲ್ಲಿ ಬೆಳೆ ನಷ್ಟವಾದರೆ ರೈತರಿಗೆ ನೆರವಾಗಲು ವಿಮೆ ಸೌಲಭ್ಯವಿದೆ. ರೈತರು ವಿಮೆ ಮಾಡಿಸಬೇಕು. ಇದರಿಂದ ಸಂಕಷ್ಟ ದಲ್ಲಿ ಪರಿಹಾರ ಸಿಗಲಿದೆ. ನಾನಾ ಬೆಳೆಗಳಿಗೆ ವಿಮಾ ಕಂತು ಪಾವತಿಸಿ ಬೆಳೆಹಾನಿ ಸಂದರ್ಭದಲ್ಲಿ ನೆರವು ಪಡೆಯಬಹುದಾಗಿದೆ. ಇಂತಹ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯನ್ನು ರಾಜ್ಯದ 224 ತಾಲೂಕುಗಳಿಗೂ ವಿಸ್ತರಿಸಲಾಗಿದೆ. ಕೃಷಿ ಪದ್ಧತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ. ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ನೀಡುವ ಸಲಹೆ, ಮಾರ್ಗದರ್ಶನಗಳನ್ನು ಅನುಸರಿಸಬೇಕಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆ ಕೃಷಿ ಯಂತ್ರೋಪಕ ರಣಗಳ ವಿತರಣೆ, ಸಹಾಯಧನ, ಇನ್ನಿತರ ಕೃಷಿ ಪೂರಕ ಚಟುವಟಿಕೆಗಳಿಗೆ ಪೆÇ್ರೀತ್ಸಾಹ ನೀಡುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಮಾತನಾಡಿ ವ್ಯವಸಾಯ ಕಷ್ಟದ ಕೆಲಸ. ಆದರೆ ಶ್ರದ್ದೆ ಆಸಕ್ತಿಯಿಂದ ಶ್ರಮವಹಿಸಿ ಮಾಡಿದರೆ ನಿರೀಕ್ಷಿತ ಲಾಭ ತಂದುಕೊಡು ತ್ತದೆ. ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಜಾರಿಗೆ ತಂದಿರುವ ಯೋಜನೆ ಗಳನ್ನು ಸದುಪ ಯೋಗ ಮಾಡಿಕೊ ಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.
ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಪರಿಚಯವಾಗುತ್ತಲೇ ಇವೆ. ಇದನ್ನು ಒಪ್ಪಿಕೊಂಡು ಅಳವಡಿಸಿಕೊಳ್ಳಬೇಕಿದೆ. ಆಧುನಿಕ ಕೃಷಿ ಪದ್ಧತಿಗೆ ಹೊಂದಿಕೊಳ್ಳಬೇಕು. ಯಂತ್ರೋಪಕರಣಗಳ ಬಳಕೆಯಿಂದ ಕೂಲಿ ವೆಚ್ಚವು ಉಳಿತಾಯವಾಗಲಿದೆ. ಹೀಗಾಗಿ ನೂತನ ಆವಿಷ್ಕಾರದತ್ತ ಹೆಚ್ಚಿನ ಗಮನ ಹರಿಸಬೇಕಿದೆ. ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳಿಗೆ , ಮಂಜೂರಾತಿ ಸಿಕ್ಕಿದೆ. ಆದಷ್ಟು ಶೀಘ್ರದಲ್ಲೇ ಈ ಎಲ್ಲಾ ಕಾಮಗಾರಿ ಆರಂಭವಾಗಲಿದೆ ಎಂದು ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ ಹನೂರು ಭಾಗದಲ್ಲಿ ಕೃಷಿಯನ್ನೇ ಅವಲಂಬಿಸಿ ಜೀವನ ಮಾಡುತ್ತಿರುವವರ ಸಂಖ್ಯೆ ಹೆಚ್ಚಿದೆ. ತಾಲೂಕಿನಲ್ಲಿ ಹೈನುಗಾರಿಕೆ ಚಟುವಟಿಕೆಗಳು ಪ್ರಗತಿಯಾಗಿದ್ದು ಅಧಿಕ ಹಾಲು ಉತ್ಪಾದನೆಯಾಗುತ್ತಿದೆ. ತೊಟಗಾರಿಕೆ. ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಬಾಳೆ, ಅರಿಶಿಣ, ಈರುಳ್ಳಿ, ಇನ್ನಿತರ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ರೈತರಿಗೆ ವಿದ್ಯುತ್, ನೀರು ಮತ್ತಷ್ಟು ಸಮರ್ಪಕವಾಗಿ ನೀಡುವ ಮೂಲಕ ಉತ್ತೇಜನ ನೀಡಬೇಕು ಎಂದರು.
ಇದೇ ವೇಳೆ ಪ್ರಗತಿಪರ ರೈತ ದಯಾನಂದ ತಾವು ನಡೆಸುತ್ತಿರುವ ವಿವಿಧ ಕೃಷಿ, ತೋಟಗಾರಿಕೆ ಬೆಳೆಯ ಬಗ್ಗೆ ಕುರಿತು ವಿವರ ಹಂಚಿಕೊಂಡರು.
ಕಾಡ ಅಧ್ಯಕ್ಷ ಪಿ. ಮರಿಸ್ವಾಮಿ, ಮಾಜಿ ಶಾಸಕ ಆರ್. ನರೇಂದ್ರ, ಕೃಷಿಕ ಸಮಾಜದ ಅಧ್ಯಕ್ಷ ರಾಘವೇಂದ್ರ ನಾಯ್ಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಆಬೀದ್, ಉಪ ಕೃಷಿ ನಿರ್ದೇಶಕ ಕೆ.ಸಿ. ಸುಷ್ಮಾ, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.