ಪಾಟ್ನಾ, ಆ. ೧೮- ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮಿತ್ರಪಕ್ಷಗಳು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ನೇತೃತ್ವದಲ್ಲಿ ಚುನಾವಣೆಯ ಎದುರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಎನ್ ಡಿಎ ಮಿತ್ರಪಕ್ಷಗಳು ಜೊತೆಯಾಗಿ ಚುನಾವಣೆ ಎದುರಿಸಿ ಮಿತ್ರಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶ. ಆ ನಂತರ ಮುಂದಿನ ಸರ್ಕಾರವನ್ನು ಯಾರು ಮುನ್ನಡೆಸಲಿದ್ದಾರೆ ಎನ್ನುವುದನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ.”ಸಮ್ಮಿಶ್ರ ಪಾಲುದಾರರ ಚುನಾಯಿತ ಶಾಸಕರು ಮೊದಲು ತಮ್ಮ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತಾರೆ, ಅವರು ಒಟ್ಟಿಗೆ ಕುಳಿತು ಮುಂದಿನ ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎನ್ನುವುದನ್ನು ನಿರ್ಧರಿಸುತ್ತಾರೆ”.
ಸದ್ಯಕ್ಕೆ ನಮ್ಮ ಗುರಿ ಎನ್‌ಡಿಎ ಮಿತ್ರಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶ ನಮ್ಮದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ “ನಿತೀಶ್ ಕುಮಾರ್ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಹೀಗಿರುವಾಗ ಬೇರೆ ಯಾರಾದರೂ ಮುಖ್ಯಮಂತ್ರಿಯಾಗಲು ಹೇಗೆ ಸಾಧ್ಯಮ ನಿತೀಶ್ ಕುಮಾರ್ ಜನಸಾಮಾನ್ಯರ ನಿಜವಾದ ಪ್ರತಿನಿಧಿ ಎಂದು ತಿಳಿಸಿದ್ದಾರೆ
ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ:
ನವಂಬರ್ ೬ ರಂದು ಬಿಹಾರದಲ್ಲಿ ಮೊದಲ ಹಂತದ ೧೨೧ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ವಿರೋಧ ಪಕ್ಷದ ಇಂಡಿಯಾ ಪಾಲುದಾರರ ನಡುವೆ ಸೀಟು ಹಂಚಿಕೆಯ ಬಿಕ್ಕಟ್ಟು ಮುಂದುವರೆದಿದೆ. ಆರ್‌ಜೆಡಿ ವಕ್ತಾರ ಚಿತ್ರಂಜನ್ ಗಗನ್ ಮಾತನಾಡಿ, ಮುಖ್ಯಮಂತ್ರಿ ಅಭ್ಯರ್ಥಿ ಯಾಗಿ ತೇಜಸ್ವಿ ಯಾದವ್ ಸೇರಿದಂತೆ ೭೧ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ೧,೬೯೮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ
ಅಭ್ಯರ್ಥಿಗಳ ಪಟ್ಡಿ ಪ್ರಕಟ
ಇಂಡಿಯಾ ಮೈತ್ರಿಕೂಟ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.ಕಾಂಗ್ರೆಸ್ ಇಪ್ಪತ್ತೈದು, ಸಿಪಿಐ(ಎಂಎಲ್) ಅಭ್ಯರ್ಥಿಗಳು ೧೪ ಮತ್ತು ವಿಕಾಸಶೀಲ ಇನ್ಸಾನ್ ಪಕ್ಷ (ವಿಐಪಿ) ದಿಂದ ಆರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿಐಪಿ ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಸಂತೋಷ್ ಸಹಾನಿ ಮತ್ತು ಉಪಾಧ್ಯಕ್ಷ ಉಮೇಶ್ ಸಹಾನಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಆದಾಗ್ಯೂ ವಿಐಪಿ ಸಂಸ್ಥಾಪಕ ಮುಖೇಶ್ ಸಹಾನಿ ಕಣದಿಂದ ಹೊರಗುಳಿಯಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ























