Home ಜಿಲ್ಲೆ ಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ ಕಾರ್ಯಕ್ರಮ

ಆ.೩೦ರಂದು ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ಸವ, ವಿದ್ಯಾರ್ಥಿವೇತನ ವಿತರಣೆ
ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಲೋಕಾರ್ಪಣೆ ಕಾರ್ಯಕ್ರಮವು ಆಗಸ್ಟ್ ೩೦ ರಂದು ನಡೆಯಲಿದೆ ಎಂದು ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ತಿಳಿಸಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಅಂದು ಬೆಳಿಗ್ಗೆ ೭ ರಿಂದ ೮.೩೦ ರವರೆಗೆ ಭಜನಾ ಸಂಕೀರ್ತನೆ, ಬಳಿಕ ಗುರುಪೂಜೆ, ಮಹಾ ಪೂಜೆ ನಡೆಯಲಿದ್ದು,೧೦.೩೦ ಕ್ಕೆ ಬಿ.ಸಿ. ರೋಡಿನ ಹೃದಯ ಭಾಗದಲ್ಲಿ ನಿರ್ಮಾಣ ಗೊಂಡಿರುವ ನೂತನ “ಬ್ರಹ್ಮಶ್ರಿ ನಾರಾಯಣಗುರು ವೃತ್ತದ ಲೋಕಾ ರ್ಪಣೆ ನೆರವೇರಲಿದೆ, ವೃತ್ತದ ಲೋಕಾರ್ಪಣೆಯ ನಂತರ ಗಣ್ಯರನ್ನು ಅದ್ದೂರಿಯ ಮೆರವಣಿಗೆಯಲ್ಲಿ ಗಾಣದಪಡ್ಪವಿ ನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಕ್ಕೆ ಕರೆತರಲಾಗುವುದು, ಹಾಗೂ ಅಪರಾಹ್ನ ತುಳು ಚಲನಚಿತ್ರ “ದೇಯಿ ಬೈದೆತಿ” ಉಚಿತ ಪ್ರದರ್ಶನ ನಡೆಯಲಿದೆ ಎಂದರು.
ದ.ಕ.ಸಂಸದ ಬ್ರಿಜೇಶ್ ಚೌಟ ಅವರು ವೃತ್ತವನ್ನು ಲೋಕಾರ್ಪಣೆಗೊಳಿಸಲಿದ್ದು, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸಭೆಯ ಅಧ್ಯಕ್ಷತೆ ವಹಿಸುವರು.ಈ ಕಾರ್ಯಕ್ರಮ ದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಸುನೀಲ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪುರಸಭೆಯ ಮುಖ್ಯಾಧಿಕಾರಿ ಕೆ.ಬಿ.ತೀರ್ಥಪ್ರಸಾದ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
೨೦೧೬ ರಲ್ಲಿ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ “ಬ್ರಹ್ಮಶ್ರೀ ನಾರಾಯಣಗುರುವೃತ್ತ” ನಿರ್ಮಾಣದ ಕುರಿತಾಗಿ ಸರ್ವಾನುಮತದ ನಿರ್ಣಯವಾಗಿದ್ದು, ಬಳಿಕ ತಾಲೂಕು ಬಿಲ್ಲವ ಸಂಘದ ವತಿಯಿಂದಲೇ ವೃತ್ತವನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸಲಾಗಿತ್ತು.
ಬಿ.ಸಿ.ರೋಡು- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಆರಂಭವಾಗುವ ವೇಳೆಗೆ ವೃತ್ತ ತೆರವುಗೊಳಿಸ ಲಾಗಿತ್ತು. ಆಗ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಲ್ಲಿ ಸಂಘದ ವತಿಯಿಂದ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಅವರು ಹೆದ್ದಾರಿ ಪ್ರಾಧಿಕಾರದ ವತಿಯಿಂದಲೇ ಬ್ರಹ್ಮಶ್ರೀ ನಾರಾಯಣಗುರು ವೃತ್ತ ನಿರ್ಮಿಸಿಕೊಡುವ ಭರವಸೆ ನೀಡಿದ್ದರು.ಅದರಂತೆ ಪೂರ್ಣವಾಗಿ ರಾ.ಹೆ.ಪ್ರಾ.ವತಿಯಿಂದ ಸುಮಾರು ೪೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆಗೆ ಸಿದ್ಧಗೊಳ್ಳಿತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ. ಅದ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಕಾರ್ಯಕಾರಿ ಸದಸ್ಯ ಬೇಬಿ ಕುಂದರ್, ಯುವ ವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.