
ಸಂಜೆವಾಣಿ ನ್ಯೂಸ್
ಮೈಸೂರು: ಜ.16:- ಮುಸಲ್ಮಾನ, ಕ್ರೈಸ್ತ, ಜೈನ, ಪೆÇೀಲಿಸ್, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಎಳ್ಳು, ಬೆಲ್ಲ ಸೀರೆ, ಕಬ್ಬು ವಿತರಿಸಿ ಸಂಕ್ರಾಂತಿ ಆಚರಿಸುವ ಮೂಲಕ ಭಾವೈಕ್ಯತೆ ಬೆಸೆಯುವ ಸಂದೇಶ ಸಾರಿದರು ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಮೈಸೂರು ಯುವ ಬಳಗದವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಶಾಸಕ ಹರೀಶ್ ಗೌಡ ಗೋಪೂಜೆ ನೆರವೇರಿಸಿದರು. ಬಳಿಕ ಮುಸಲ್ಮಾನ್ ,ಕ್ರೈಸ್ತರು, ಜೈನ , ಪೆÇೀಲಿಸ್, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಎಳ್ಳು, ಬೆಲ್ಲ , ಕಬ್ಬು,ಸೀರೆ ವಿತರಿಸುವ ಮೂಲಕ ಸೌಹಾರ್ದತೆ ಮೆರೆದರು.
ಬಳಿಕ ಮಾತನಾಡಿದ ಅವರು, ಇತಿಹಾಸದಲ್ಲಿ ಎಲ್ಲಾ ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎಲ್ಲಾ ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ದಿನ ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ಥರ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆ ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದರು.


























