
ಬೀಡ್,ಮೇ.27- ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಗೆವ್ರೈ ಪಟ್ಟಣದ ಬಳಿಯ ಗಾಂಧಿ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ.6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪೆÇಲೀಸರ ಪ್ರಕಾರ, ಎಸ್‍ಯುವಿ ಕಾರು ಇದ್ದಕ್ಕಿದ್ದಂತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜನರು ಸುರಕ್ಷಿತವಾಗಿದ್ದರು. ಇದಾದ ನಂತರ, ಅವರೆಲ್ಲರೂ ವಾಹನದಿಂದ ಕೆಳಗಿಳಿದು ಅಪಘಾತಕ್ಕೀಡಾಗಿದ್ದ ಕಾರನ್ನು ರಸ್ತೆಯಿಂದ ತೆರವುಗೊಳಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಹರಿದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೀಡ್‍ನ ಜಿಯೋರೈ ನಿವಾಸಿಗಳಾದ ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ , ಮನೋಜ್ ಕರಂಡೆ, ಕೃಷ್ಣ ಜಾಧವ್ ಮತ್ತು ದೀಪಕ್ ಸುರಯ್ಯ ಮೃತರು ಎಂದು ತಿಳಿದು ಬಂದಿದೆ.
ಘಟನೆಯ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ತನಿಖೆ ನಡೆಯುತ್ತಿದೆ ಎಂದು ಬೀಡ್ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ನವನೀತ್ ಕನ್ವತ್ ಹೇಳಿದ್ದಾರೆ. ಟ್ರಕ್ ಚಾಲಕನ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ. ಪೆÇಲೀಸರು ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ, ಸ್ಥಳೀಯ ಜನರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಅಪಘಾತಕ್ಕೀಡಾದ ಹೆದ್ದಾರಿಯಲ್ಲಿ ಸಂಚಾರ ಸ್ವಲ್ಪ ಸಮಯದವರೆಗೆ ಅಸ್ತವ್ಯಸ್ತವಾಗಿತ್ತು. ಹೆದ್ದಾರಿಯಲ್ಲಿ ಆಡಳಿತವು ಉತ್ತಮ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.