ಮಂಡೆಕೋಲಿನಲ್ಲಿ ಸಾಹಿತ್ಯ ಸಂಭ್ರಮ – ಕನ್ನಡ ಗಾನಯಾನ ಕಾವ್ಯ ಮಿಲನ ಕಾರ್ಯಕ್ರಮ

ಸುಳ್ಯ:ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ವತಿಯಿಂದ ಕನ್ನಡ ಗಾನಯಾನ ಕಾವ್ಯ ಮಿಲನ ಕಾರ್ಯಕ್ರಮ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ರಾಷ್ಟ್ರ ಧ್ವಜಾರೋಹಣವನ್ನು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಖ್ಯಾತ ವೈದ್ಯರಾದ ಡಾ ಅನಂತಪದ್ಮನಾಭ ಭಟ್ ಎರ್ಕಲ್ಪಾಡಿಯವರು ಕನ್ನಡ ಗಾನ ಯಾನ ಕಾವ್ಯ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್‌ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ವಹಿಸಿದ್ದರು.
ರಾಜ್ಯೋತ್ಸವ ಉಪನ್ಯಾಸ ಕಾರ್ಯಕ್ರಮವನ್ನು ಕ.ಸಾ.ಪದ ಕಾರ್ಯಾಕಾರಿ ಸಮಿತಿ ಸದಸ್ಯರು, ಅಜ್ಜಾವರ ಪ್ರೌಢ ಶಾಲೆಯ ಮುಖ್ಯೋಫ್ಯಾದ್ಯಾಯ ಗೋಪಿನಾಥ್ ಮೆತ್ತಡ್ಕ ನಡೆಸಿಕೊಟ್ಟರು. ವೇದಿಕೆಯಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಮುಖ್ಯ ಶಿಕ್ಷಕಿ ಮಂಜುಳಾ, ಕ.ಸಾ.ಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮುರಳೀಧರ ರೈ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನುತಾ ಪಾತಿಕಲ್ಲು ಉಪಸ್ಥಿತರಿದ್ದರು.ಸುರೇಶ್ ಕಣೆಮರಡ್ಕ ಸ್ವಾಗತಿಸಿ ರಾಮಚಂದ್ರ ಪಲ್ಲತ್ತಡ್ಕ ವಂದಿಸಿದರು. ಕಸಾಪ ನಿರ್ದೇಶಕಿ ಸಾವಿತ್ರಿ ಕಣೆಮರಡ್ಕ ನಿರೂಪಿಸಿದರು.