(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಆ.15: ನಿನ್ನೆ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಗಾಂಧಿ ಭವನದಿಂದ ಗಡಿಗಿ ಚೆನ್ನಪ್ಪ ವೃತ್ತದ ವರೆಗೆ “ಮತಗಳ್ಳರೇ ಅಧಿಕಾರ ಬಿಡಿ” ಎಂಬ ಘೋಷಣೆಯೊಂದಿಗೆ ಚುನಾವಣಾ ಆಯೋಗದ ವಿರುದ್ಧ ಮೇಣದ ಬತ್ತಿ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು.
ಈ ವೇಳೆ ಮಾತನಾಡಿದ ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಮತಗಳ್ಳತನ ಮಾಡಿರುವ ಭ್ರಷ್ಟ ಬಿಜೆಪಿ ಸರ್ಕಾರ ವಿರುದ್ಧ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಗಳು ರಾಜೀನಾಮೆ ನೀಡಬೇಕು ಹಾಗೆಯೇ ಇನ್ನೂ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದರು.
ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಜಿಪಂ ಮಾಜಿ ಸದಸ್ಯ ಎ.ಮಾನಯ್ಯ, ಮಹಿಳಾ ಕಾರ್ಯಕರ್ತರು ಮತ್ತು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.



























