
ತುಮಕೂರು, ಮಾ. 8- ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನಾಗವಲ್ಲಿ ಸಮೀಪದ ಸೋಪನಹಳ್ಳಿಗೇಟ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೇರಳ ಮೂಲದ ರಷೀದ್ ಅಲಿ (25) ಹಾಗೂ ಅಮೀನ್ (23) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದಿಂದ ಕೇರಳಕ್ಕೆ ಲಾರಿಯಲ್ಲಿ ಕಡಪ ಕಲ್ಲು ಸಾಗಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣದ ತಪ್ಪಿದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇವರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ನಂತರ ಕುಣಿಗಲ್? ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಅಪಘಾತ ವಿಷಯ ತಿಳಿದು ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು.
ಘಟನೆಯ ಸುದ್ದಿ ತಿಳಿದ ಕೂಡಲೇ ಹೆಬ್ಬೂರು ಪೆÇಲೀಸರು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕುಣಿಗಲ್ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು. ಅದೃಷ್ಟವಶಾತ್ ಲಾರಿ ಡಿಕ್ಕಿ ಹೊಡೆದ ಅರಳಿ ಮರದ ಕೆಳಗಡೆ ಯಾರೂ ಕುಳಿತಿರಲಿಲ್ಲ. ಒಂದು ವೇಳೆ ಕುಳಿತಿದ್ದರೆ ಸಾವು ನೋವು ಜಾಸ್ತಿಯಾಗುತ್ತಿತ್ತು.
ಸಂಬಂಧಪಟ್ಟ ಅಧಿಕಾರಿಗಳು ಹೊನ್ನುಡಿಕೆ ಹ್ಯಾಂಡ್ ಪೆÇೀಸ್ಟ್ ಸೇರಿದಂತೆ ತುಮಕೂರು-ಕುಣಿಗಲ್ ಮಾರ್ಗದಲ್ಲಿ ಬರುವ ಹಳ್ಳಿಗಳು, ಗ್ರಾಮಗಳ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಉಬ್ಬು ಅಳವಡಿಸಬೇಕು.
ಈ ಮೂಲಕ ಅಪಘಾತ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಸಂಬಂಧ ಹೆಬ್ಬೂರು ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




























