ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ತಾತ್ಕಾಲಿಕ ನಿರ್ಭಂಧ

ಸಂಜೆವಾಣಿ ವಾರ್ತೆ
ಹನೂರು.ಆ.16 :-
ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗುವ ದೀಪಾವಳಿ ಜಾತ್ರಾ ಮಹೋತ್ಸವ ವಿಶೇಷವಾಗಿ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಎಲ್ಲಾ ಮಾದರಿಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಶಿಲ್ಪನಾಗ್ ರವರು ತತ್ಕಾಲಿಕ ಆದೇಶ ಹೊರಡಿಸಿದ್ದಾರೆ.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2025 ನೇ ಸಾಲಿನಲ್ಲಿ 19-10-2025 ರಿಂದ 22-10-2025 ವರೆಗೆ ನಡೆಯಲಿರುವ ದೀಪಾವಳಿ ಜಾತ್ರೆ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಸುರಕ್ಷತಾ ದೃಷ್ಟಿಯಿಂದ ಎಲ್ಲಾ ಮಾದರಿಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು (ಆಟೋರಿಕ್ಷಾ ಮತ್ತು ಗೂಡ್ಡ ವಾಹನಗಳು ಸೇರಿದಂತೆ) ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.


ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆ-ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಸೇರುವ ಸಂಭವವಿದ್ದು ಈ ಸಂಬಂಧ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿ ಅಪಘಾತಗಳು ಉಂಟಾಗುವ ಹಾಗೂ ಈ ಸಂಬಂಧ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಸಂಭವವಿರುತ್ತದೆ.
ಈ ಹಿನ್ನೆಲಯಲ್ಲಿ ಕೌದಳ್ಳಿ ಗ್ರಾಮದ ಪ್ರಕಾಶ್ ಗಾರ್ಡ್‍ನ್ ನಿಂದ ಮಲೈ ಮಹದೇಶ್ವರ ಬೆಟ್ಟದವರೆಗೆ ಎಲ್ಲಾ ಮಾದರಿಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು (ಆಟೋರಿಕ್ಷಾ ಮತ್ತು ಗೂಡ್ಸ್ ವಾಹನಗಳು ಸೇರಿದಂತೆ) ಪ್ರವೇಶವನ್ನು ನಿಷೇಧಿಸಿದೆ. ಕೌದಳ್ಳಿ ಗ್ರಾಮದ ಹೊರ ವಲಯದ ಪ್ರಕಾಶ್ ಗಾರ್ಡನ್ ನಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಅಗತ್ಯ ಅವಸ್ಥೆ ಮಾಡಲಾಗಿದೆ.
ವಾಹನ ಸವಾರರು ನಿಲುಗಡೆ ಸ್ಥಳದಿಂದ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಸಾರಿಗೆ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ.