ಸಂಜೆವಾಣಿ ವಾರ್ತೆ
ಹನೂರು ಆ 21 :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ 2 ಕೋಟಿ, 20 ಲಕ್ಷ, 22 ಸಾವಿರ ರೂ ಸಂಗ್ರಹವಾಗಿದೆ.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬುಧವಾರ ಬೆಳಿಗ್ಗೆ 7-00 ಗಂಟೆಯಿಂದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
ದಿನಾಂಕ : 18/07/2025ರಿಂದ 19/08/2025ರ ವರೆಗಿನ 33 ದಿನಗಳಲ್ಲಿ ಒಟ್ಟು ಮೊತ್ತ ರೂ.2,20,22,454 -00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 55 ಗ್ರಾಂ, ಬೆಳ್ಳಿ 01 ಕೆ.ಜಿ 627 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಹಾಗೂ ವಿದೇಶಿ ನೋಟುಗಳು 30, ಚಲಾವಣೆಯಾಗದ 2000 ಮುಖಬೆಲೆಯ 7 ನೋಟುಗಳು ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಕಾಗಲವಾಡಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಸಮಂತ ಕುಮಾರ್ ಪ್ರ.ದ.ಸ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೆÇಲೀಸ್ ಅಧಿಕಾರಿ ಸಿಬ್ಬಂದಿಗಳು. ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.



























