ಸಂಜೆವಾಣಿ ವಾರ್ತೆ
ಹನೂರು.ಮಾ.5:- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು ಕಳೆದ 28 ದಿನಗಳಲ್ಲಿ ಸುಮಾರು ಒಟ್ಟು ಮೊತ್ತ 3 ಕೋಟಿ 41 ಲಕ್ಷ ,44 ಸಾವಿರ ರೂ. ಸಂಗ್ರಹವಾಗಿದೆ
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7-00 ಗಂಟೆಯಿಂದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ದಿನಾಂಕ 04-02-2026 ರಿಂದ 03-03-2026 ರ ವರೆಗಿನ 28 ದಿನಗಳಲ್ಲಿ ಒಟ್ಟು ಮೊತ್ತ ರೂ.3,41,44,208 -00 ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 71 ಗ್ರಾಂ, ಬೆಳ್ಳಿ 02 ಕೆ.ಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಹಾಗೂ ವಿದೇಶಿ ನೋಟುಗಳು 19, ಮತ್ತು ಚಲಾವಣೆಯಾಗದ 2000 ಮುಖಬೆಲೆಯ ಆರು ನೋಟುಗಳು ಹುಂಡಿಯಲ್ಲಿ ದೊರೆತಿದೆ.
ಈ ಸಂದರ್ಭದಲ್ಲಿ ಪ್ರಾಧಿಕಾರ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ನಿಮನಿರ್ದೇಶಿತ ಸದಸ್ಯ ಮರಿಸ್ವಾಮಿ, ಕಾಗಲವಾಡಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ವೇತ, ಪ್ರಾಧಿಕಾರದ ಸಿಬ್ಬಂದಿಗಳು, ಪೆÇಲೀಸ್ ಅಧಿಕಾರಿಗಳು, ಕೊಳ್ಳೇಗಾಲ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
























