ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಜಿ.ಪಂ. ಸಿಇಒ ಮೋನಾ ರೋತ್ ಸಲಹೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.31-
ಸ್ವ-ಸಹಾಯ ಸಂಘದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಲಹೆ ಮಾಡಿದರು.


ತಾಲೂಕಿನ ಮಾದಪುರದಲ್ಲಿರುವ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿಂದು ಆಯೋಜಿಸಿದ್ದ ಲಘುವಾಹನ ಚಾಲನಾ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.


ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಕಾರ್ಯಕ್ರಮದಡಿ ಮನೆ ಮನೆಗಳಿಂದ ಕಸವನ್ನು ಸಂಗ್ರಹಿಸಿ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅನುμÁ್ಠನ ಮಾಡಲಾಗಿದೆ. ಸ್ವ-ಸಹಾಯ ಸಂಘದ ಮಹಿಳೆಯರು ಆರ್ಥಿಕವಾಗಿ ಸಬಲಿಕರಣ ಹೊಂದುವುದರ ಜೊತೆಗೆ ಗ್ರಾಮದ ನೈರ್ಮಲ್ಯ ಕಾಪಾಡಬೇಕು ಎಂದು ಚಾಲನಾ ತರಬೇತಿಯಲ್ಲಿ ಪಾಲ್ಗೊಂಡಿದ್ದ ಸ್ವ ಸಹಾಯ ಸಂಘದ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಕಿವಿಮಾತು ಹೇಳಿದರು. ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೆಶಕರು ಈ ಸಂದರ್ಭದಲ್ಲಿ ಇದ್ದರು.