
ಮಾಲೂರು, ಅ. ೧೭- ಮಾಲೂರು ದೆಹಲಿಯ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರಿಗೆ ತುಂಬಿದ ಕೋರ್ಟ್ ಹಾಲ್‌ನಲ್ಲಿ ಶೂ ಎಸೆದ ವಕೀಲನನ್ನು ಬಂಧಿಸಿ ಕಾನೂನು ಕ್ರಮ ವಹಿಸುವಂತೆ ಜಿಲ್ಲೆಯಾದ್ಯಂತ ದಲಿತಪರ ಪ್ರಗತಿಪರ ಸಂಘಟನೆಗಳು ನೀಡಿದ್ದ ಕೋಲಾರ ಜಿಲ್ಲಾ ಬಂಧ್ ಪಟ್ಟಣದ ದಲಿತ ಪರ ಪ್ರಗತಿಪರ ಸಂಘಟನೆಗಳು ಮುಖ್ಯರಸ್ತೆಯಲ್ಲಿ ವಾಹನಗಳನ್ನು ಸ್ಥಗಿತಗೊಳಿಸಿ ಕೆಂಪೇಗೌಡ ವೃತ್ತ ಮಾರಿಕಾಂಬ ರುತ್ತ ರೈಲ್ವೆ ನಿಲ್ದಾಣದ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ಬಂದುನಿಂದ ನಗರದ ಬಸ್ ನಿಲ್ದಾಣದಲ್ಲಿ ಬಸ್ ಗಳ ಸಂಖ್ಯೆ ವಿರಳವಾಗಿತ್ತು ಬೆಳಗ್ಗೆ ಇತರ ಕಡೆ ಪ್ರಯಾಣಿಸುವ ಪ್ರಯಾಣಿಕರು ವಿದ್ಯಾರ್ಥಿಗಳಿಗೆ ಬಸ್ಸುಗಳಿಲ್ಲದೆ ಪರದಾಡುವಂತಾಗಿತ್ತು ಕೆಲವು ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದಿಗೆ ಬೆಂಬಲ ವ್ಯಕ್ತಪಡಿಸಿದ್ದರು






























