ಮುಂಬೈ: ಆ,21:- ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಈ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂಬೈನಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿಯಲ್ಲೋ ಅಲರ್ಟ್ ಘೋಷಿಸಲಾಗಿದ್ದು ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳಲ್ಲಿ ಸಂಚಾರ ಅಡಚಣೆ ಆಗಿದೆ, ಹಲವು ನಗರಗಳು ಜಲಾವೃತವಾಗಿದೆ. ಈ ನಡುವೆ ಮಳೆಯ ತೀವ್ರತೆ ಕಡಿಮೆಯಾಗಿದೆ. ಮಳೆಯಿಂದಾಗಿ ರಜೆ ನೀಡಿದ ನಂತರ ಸಾರ್ವಜನಿಕ ಸಾರಿಗೆಸೇವೆಗಳು ಮುಂಬೈನಲ್ಲಿ ಸಾಮಾನ್ಯ ಸೇವೆ ಪುನರಾರಂಭಿಸಿವೆ, ಆದರೆ ಶಾಲೆಗಳು ಮತ್ತು ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಇಂದಿನಿಂದ ಮತ್ತೆ ಆರಂಭವಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಉಪನಗರಗಳನ್ನು ಪ್ರತಿನಿಧಿಸುವ ಮುಂಬೈನಲ್ಲಿರುವ ಸಾಂತಕ್ರೂಜ್‍ನಲ್ಲಿ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ 200 ಮಿಮೀ ಮಳೆ ದಾಖಲಾಗಿದೆವಿಖ್ರೋಲಿಯಲ್ಲಿ 229.5 ಮಿಮೀ, ಮುಂಬೈ ವಿಮಾನ ನಿಲ್ದಾಣದಲ್ಲಿ 208 ಮಿಮೀ, ಬೈಕುಲ್ಲಾ 193.5 ಮಿಮೀ, ಜುಹು 150 ಮಿಮೀ ಮತ್ತು ಬಾಂದ್ರಾದಲ್ಲಿ 137.5 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
“ದಕ್ಷಿಣ ಮುಂಬೈನಲ್ಲಿರುವ ಕೊಲಾಬಾ ವೀಕ್ಷಣಾಲಯದಲ್ಲಿ 107.4 ಮಿಮೀ ಮಳೆಯಾಗಿದೆ, ಪಶ್ಚಿಮ ಉಪನಗರಗಳಲ್ಲಿರುವ ಸಾಂತಕ್ರೂಜ್ ವೀಕ್ಷಣಾಲಯದಲ್ಲಿ 24ಗಂಟೆಗಳ ಅವಧಿಯಲ್ಲಿ 209 ಮಿಮೀ ಮಳೆಯಾಗಿದೆ” ಎಂದು ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ ಮುಂಬೈನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆಡಳಿತ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದೆ ಮತ್ತು ಮಳೆಯಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಒಟ್ಟಾರೆ ಮಳೆ ಪರಿಸ್ಥಿತಿ ಬಹುತೇಕ ನಿಯಂತ್ರಣದಲ್ಲಿದೆ, ಆದರೂ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.” ಮಳೆಯಿಂದ 14ಲಕ್ಷ ಹೆಕ್ಟೇರ್‍ಗಳಲ್ಲಿ ಬೆಳೆಗಳು ಹಾನಿಯಾಗಿವೆ, ರಾಜ್ಯ ಸರ್ಕಾರ ರೈತರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

























