Home ಜಿಲ್ಲೆ ಬೆಂಗಳೂರು ಮುನ್ನೇಕೊಳಲ ಗ್ರಾಮ ಜಾತ್ರೆಯಲ್ಲಿ ಹಲ್ಲೆ ಕಿಡಿಗೇಡಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಮುನ್ನೇಕೊಳಲ ಗ್ರಾಮ ಜಾತ್ರೆಯಲ್ಲಿ ಹಲ್ಲೆ ಕಿಡಿಗೇಡಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಬೆಂಗಳೂರು.ಏ3:ಮಾರತ್ತಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಮುನ್ನೇಕೊಳಲ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ಅದ್ದೂರಿಯಾಗಿ ನಡೆಯುತ್ತಿದ್ದ ಜಾತ್ರೆಯಲ್ಲಿ ಭಾರಿ ಜನಸಂದಣಿ ಇರುವ ವೇಳೆಯಲ್ಲಿ ಈ ಘಟನೆ ನಡೆದಿದೆ.


ಸ್ಥಳೀಯ ಮಾಹಿತಿ ಪ್ರಕಾರ, ಪಲ್ಲಕ್ಕಿ ಮೆರವಣಿಗೆ ವೇಳೆ ತಮಟೆ ವಾದ್ಯಗಳೊಂದಿಗೆ ನೃತ್ಯ ಮಾಡುತ್ತಿದ್ದ ತಂಡದವರಿಗೆ ಜನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಈ ವೇಳೆ ಪಕ್ಕದ ಗ್ರಾಮದಿಂದ ಆಗಮಿಸಿದ್ದ ಕೆಲವರು ಕುಡಿದ ಅಮಲಿನಲ್ಲಿ ಆಕ್ರೋಶಗೊಂಡು, ಸುಮಾರು 10 ರಿಂದ 15 ಜನರು ಸೇರಿ ಹಲ್ಲೆ ನಡೆಸಿದ್ದಾರೆಂದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಈ ಘಟನೆಯ ಕುರಿತು ಗ್ರಾಮ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ರೆಡ್ಡಿ, ರಾಜೇಶ್ ರೆಡ್ಡಿ, ಹೇಮಂತ್, ಉಮೇಶ್ ಗೋಪಾಲ್ ರೆಡ್ಡಿ ಮತ್ತು ಕೌಶಿಕ್ ಉಪಸ್ಥಿತರಿದ್ದರು.
ಘಟನೆಯ ಸಂಬಂಧವಾಗಿ ಈಗಾಗಲೇ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೆÇಲೀಸರು 4 ಜನರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.


ಹಲ್ಲೆಯಲ್ಲಿ ಭಾಗವಹಿಸಿದವರ ಪರವಾಗಿ ಯಾವುದೇ ರಾಜಕೀಯ ಹಸ್ತಕ್ಷೇಪ ನಡೆಯಬಾರದು ಎಂದು ಗ್ರಾಮಸ್ಥರು ಆಗ್ರಹಿಸಿದರು. ಅಪರಾಧದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮದ ಮೂಲಕ ಕಠಿಣ ಶಿಕ್ಷೆ ವಿಧಿಸಬೇಕೆಂದು ಪೆÇಲೀಸ್ ಇಲಾಖೆಯನ್ನು ಮನವಿ ಮಾಡಿದ್ದಾರೆ.