
ಸಮಸ್ತದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡಿರುವ ಶತಾಬ್ದಿ ಸಂದೇಶ ಯಾತ್ರೆಯ ಪ್ರಚಾರಾರ್ಥ ಸಮಸ್ತ ಆದರ್ಶ ಮಹಾ ಸಮ್ಮೇಳನವು ಡಿ.೭ ರಂದು ಭಾನುವಾರ ಮಧ್ಯಾಹ್ನ ಎರಡು ಗಂಟೆಯಿಂದ ಮೂಡುಬಿದಿರೆಯ ಲಾಡಿಯಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಏರ್ ಇಂಡಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.



























