
ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮವನ್ನು ಮೇ ೨೦ ರಂದು ಮಂಗಳವಾರ ಬೆಳಿಗ್ಯೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಶಿರಹಟ್ಟಿ ಮಠದ ನಿರಂಜನ ಸ್ವಾಮೀಜಿ ಆಶೀರ್ವಚನ ನೀಡುವರು.
ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಸ್ವಾಸ್ಥ?ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಹೇಮಾವತಿ ವೀ, ಹೆಗಡೆ ಶುಭಾಶಂಸನೆ ಮಾಡುವರು.
೨೯೦೦ ಮಂದಿ ವ್ಯಸನ ಮುಕ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.