ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ

ಸಂಜೆವಾಣಿ ವಾರ್ತೆ
ಮಂಡ್ಯ: ಸೆ.03:-
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ ಮೈಸೂರು-ಕುಶಾಲ ನಗರ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಸಂಬಂಧಿಸಿದಂತೆ ಕಾಮಗಾರಿ ಗಳನ್ನು ಪರಿಶೀಲಿಸಿದರು.
ಮೈಸೂರು-ಕುಶಾಲನಗರ ಹೆದ್ದಾರಿಗೆ ಸಂಬಂಧಿಸಿದಂತೆ ಕಾಮಗಾರಿಯನ್ನು ತುರ್ತಾಗಿ ಗುಣಾತ್ಮಕ ಮಟ್ಟದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯು ಹಾದುಹೋಗಲಿರುವ ಗ್ರಾಮಗಳಲ್ಲಿನ ಜಮೀನುಗಳ ರೈತರು ತಮ್ಮ ಜಮೀನುಗಳ ಸಂಪರ್ಕ ರಸ್ತೆಗಾಗಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಬಗ್ಗೆ ಪರಿಶೀಲಿಸಿ, ಸಾರ್ವಜನಿಕರಿಗೆ ಉಪಯೋಗ ವಾಗುವಲ್ಲಿ ನಿಯಮಾನುಸಾರ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಯೋಜನೆ ಜಿಲ್ಲೆಯ ಸಾರಿಗೆ, ಪ್ರವಾಸೋದ್ಯಮ ವಲಯಗಳ ಬೆಳವಣಿಗೆಗೆ ಸಹಕಾರಿ ಯಾಗಿರುತ್ತದೆ.ಜಿಲ್ಲೆಯ ಆರ್ಥಿಕ ಅಭಿವೃದ್ಧಿಯ ಜೊತೆಗೆ ಸುರಕ್ಷಿತ ರಸ್ತೆ ಪ್ರಯಾಣಕ್ಕೆ ಅನುಕೂಲವಾಗಿರುವ ಹೆದ್ದಾರಿಗೆ ಸಂಬಂಧಿಸಿದಂತೆ ಅಪೂರ್ಣವಾಗಿರುವ ಕಾಮಗಾರಿ ಗಳನ್ನು ತುರ್ತಾಗಿ ಪೂರ್ಣಗೊಳಿಸು ವಂತೆ,ಜೊತೆಗೆ ಅಪಘಾತಗಳನ್ನು ತಪ್ಪಿಸುವಲ್ಲಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಈ ಸಂಧರ್ಭದಲ್ಲಿ ಜಿಲ್ಲೆಯ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಆರಕ್ಷಕ ಅಧೀಕ್ಷಕ ತಿಮ್ಮಯ್ಯ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಎಂ.ಎಸ್.ವಬಾಲೆ ಹಾಜರಿದ್ದರು.