
ಉಡುಪಿ, ಫೆ.೨೩: ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ, ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (೨೦) ಎಂಬ ಯುವತಿ ಫೆ.೨೦ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
೫ಅಡಿ ೬ ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: ೦೮೨೦-೨೫೨೬೭೦೯/೨೫೨೬೪೪೪, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂ: ೦೮೨೫೮-೨೩೧೩೩೩, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: ೦೮೨೦-೨೫೭೨೩೩೩, ಮೊಬೈಲ್: ೯೪೮೦೮೦೫೪೩೧, ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂ: ೦೮೨೦-೨೫೫೧೦೩೩, ಮೊಬೈಲ್: ೯೪೮೦೮೦೫೪೪೯ ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.





























