ರಮ್ಯಾಗೆ ಅಶ್ಲೀಲ ಕಾಮೆಂಟ್ ಚಾರ್ಜ್ ಶೀಟ್ ಗೆ ಸಿಸಿಬಿ ಸಿದ್ಧತೆ

ಬೆಂಗಳೂರು,ಅ.೫-ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಮಾಡಿದ್ದ ಪ್ರಕರಣದಲ್ಲಿ ಬಂಧಿತ ೧೨ ಮಂದಿ ಆರೋಪಿಗಳಿಗೆ ಇನ್ನೂ ಜಾಮೀನು ಸಿಕ್ಕಿಲ್ಲ.
ಕಳೆದ ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳು ಕಳೆಯುತ್ತಿದ್ದು,ಅವರಿಗೂ ಜಾಮೀನು ದೊರೆತಿಲ್ಲ, ಇತ್ತ ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ಇನ್ನೊಂದು ವಾರದಲ್ಲಿ ಚಾರ್ಜ್‌ಶೀಟ್ ಹಾಕಲು ಸಿದ್ಧತೆ ನಡೆಸಿದ್ದಾರೆ.


ಕಳೆದ ಜುಲೈನಲ್ಲಿ ನಟಿ ರಮ್ಯಾ, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನ್ಯಾಯ ಸಿಗಬೇಕು ಅಂತಾ ಕಾಮೆಂಟ್ ಮಾಡಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿದ ಹಲವರು ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಸಂಬಂಧ ೪೩ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.


ಪ್ರಕರಣ ತನಿಖೆಯನ್ನು ಕೈಗೊಂಡ ಸಿಸಿಬಿ ಪೊಲೀಸರು, ರಾಜ್ಯಾದ್ಯಂತ ಹನ್ನೆರಡು ಜನ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಇಲ್ಲಿಯವರೆಗೆ ಯಾವುದೇ ಆರೋಪಿಗೆ ಜಾಮೀನು ಸಿಕ್ಕಿಲ್ಲ.