ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವು

ಮಂಗಳೂರು-ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ ಹೋಗಿದ್ದರು. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ, ಜೆಪ್ಪಿನಮೊಗರು ಬಳಿ ಅವರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಅವರು ಪಕ್ಷದ ಸಮಘಟನೆಯಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.