
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಫೆ.08:– ಮಾನವ ಜನ್ಮ ಮಹತ್ವವಾದದ್ದು, ನಮ್ಮಿಂದ ಇನ್ನೊಬ್ಬರ ಜೀವಕ್ಕೆ ತೊಂದರೆಯಾಗದ ರೀತಿಯಲ್ಲಿ ಬದುಕಿದಾಗ ಮಾತ್ರ ಜನ್ಮ ಸಾರ್ಥಕ ಎಂದು ಆರ್.ಟಿ.ಓ ಅಧಿಕಾರಿಗಳ ಸಂಘದ ರಾಜ್ಯಧ್ಯಕ್ಷರು ಹಾಗೂ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.
ಅವರು ಪಟ್ಟಣದಲ್ಲಿಂದು ನಾಗಮಂಗಲ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ ಆಯೋಜಿಸಿದ್ದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.
ಜೀವಿಸುವುದು ಪ್ರತಿಯೊಬ್ಬ ನಾಗರೀಕನ ಮೂಲಭೂತ ಹಕ್ಕು. ಆದ್ದರಿಂದ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಅಪಘಾತ ತಪ್ಪಿಸುವ ಮೂಲಕ ಇತರರ ಹಕ್ಕುಗಳನ್ನು ಗೌರವಿಸಬೇಕು. ಅಜಾಗರೂಕತೆ ವಾಹನ ಚಾಲನೆ, ಮದ್ಯಪಾನ, ಅತಿ ವೇಗದ ಚಾಲನೆ, ಮೊಬೈಲ್ ಫೆÇೀನ್ ಬಳಕೆ, ಸಂಚಾರ ನಿಯಮ ಉಲ್ಲಂಘನೆ, ಸೀಟ್ ಬೆಲ್ಟ್ ಮತ್ತು ಹೆಲ್ಮೆಟ್ ಧರಿಸದಿರುವುದು ಭೀಕರ ರಸ್ತೆ ಅಪಘಾತಕ್ಕೆ ಕಾರಣವಾಗಲಿದೆ. ಇದರಿಂದ ಅಪಘಾತಕ್ಕೆ ಒಳಗಾದವರ ಕುಟುಂಬಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಲಿದೆ. ಕಾನೂನು ಮತ್ತು ಸಂಚಾರಿ ನಿಯಮಗಳನ್ನು ಪಾಲಿಸಲು ಸಲಹೆ ನೀಡಿದ ಅವರು ವಾಹನ ಚಾಲಕರು ದೂರದ ಪ್ರಯಾಣ ಮಾಡುವಾಗ ವಾಹನ ಕೆಟ್ಟು ನಿಂತರೆ ರಸ್ತೆಯಲ್ಲಿಯೇ ಕಲ್ಲು ಇನ್ನಿತರೆ ಉಪಕರಣ ಬಳಸಿ ವಾಹನವನ್ನು ರಸ್ತೆಯಲ್ಲೇ ಬಿಟ್ಟು ತೆರಳುವರು. ಇದರಿಂದಾಗಿ ಹಲವು ಅಪಘಾತ ಸಂಭವಿಸಿವೆ. ಸುರಕ್ಷಿತವಾಗಿ ವಾಹನ ಚಲಾಹಿಸಿ, ನೀವು ಜೀವಿಸಿ ಇತರರನ್ನು ಜೀವಿಸಲು ಬಿಡಿ. ಮೊದಲು ವಿದ್ಯಾವಂತ ಸಮಾಜ ರಸ್ತೆ ಸುರಕ್ಷತಾ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ ಗ್ರಾಮೀಣ ಜನರಿಗೆ ಮಾದರಿ ಯಾಗಬೇಕು ಎಂದು ಆರ್.ಟಿ.ಓ ಮಲ್ಲಿಕಾರ್ಜುನ್ ಕರೆ ನೀಡಿದರು.
ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಸಹಾಯ ನಿರ್ದೇಶಕ ಹೊನ್ನೇಗೌಡ ಮಾತನಾಡಿ ಭಾರತದಲ್ಲಿ ಪ್ರತಿವರ್ಷ ಜನವರಿ ತಿಂಗಳಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ರಸ್ತೆ ಅಪಘಾತ ತಡೆಗಟ್ಟಲು ಮತ್ತು ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೆÇಲೀಸ್ ಇನ್ಸ್ಪೆಕ್ಟರ್ ಆನಂದೇಗೌಡ, ನಾಗಮಂಗಲ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಸಿ.ಎನ್ ಸತೀಶ್, ಮೋಟಾರು ವಾಹನ ನಿರೀಕ್ಷಕಿ ಶಬಜಾಭಾನು ಸೇರಿದಂತೆ ಹಲವರು ಉಪಸ್ಥಿತರಿದ್ದರು.






























