
ಮಂಗಳೂರು : ಡಿ.ಕೆ.ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉರ್ವ ಮಾರಿಯಮ್ಮ ದೇವಾಸ್ಥಾನ ಹಾಗೂ ಉರ್ವ ಕೊರಗಜ್ಜನ ಗುಡಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ದೇವಸ್ಥಾನದ ಆಡಳಿತ ಮುಖ್ಯಸ್ಥರು ಹಾಗೂ ಸರ್ವ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರೇಮ್ ಕುಮಾರ್, ಅನಿಲ್ ಕಂಕನಾಡಿ, ಅಕ್ಮಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮೂಡುಬಿದಿರೆ| ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಮೂಡುಬಿದಿರೆ : ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಜಾನುವಾರುಗಳನ್ನು ಅಕ್ರಮವಾಗಿ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ಟೆಂಪೋ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ರವಿವಾರ ಬಂಧಿಸಿದ್ದಾರೆ.
ಕಾರ್ಕಳದ ಜಾಕ್ವೆಲಿನ್ ಮತ್ತು ಜಾಕ್ಸನ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ಪಿಕಪ್ ವಾಹನದಲ್ಲಿ ಅನಧಿಕೃತವಾಗಿ ಎರಡು ಕೋಣಗಳು ಮತ್ತು ಒಂದು ಕರುವನ್ನು ತುಂಬಿಸಿಕೊಂಡು ಬರುತ್ತಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಆಲಂಗಾರು ಅಂಡರ್ ವಾಸ್ ಬಳಿ ವಾಹನವನ್ನು ನಿಲ್ಲಿಸಿ ತನಿಖೆ ನಡೆಸಿದಾಗ ಜಾನುವಾರು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಸಾಗಿಸುತ್ತಿರುವುದರಿಂದ ಇಬ್ಬರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಅವರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.




























