Home ಜಿಲ್ಲೆ ರಾಜ್ಯಸಭಾ ಸದಸ್ಯರಿಂದ ವಿಶೇಷ ನಮಾಜ್

ರಾಜ್ಯಸಭಾ ಸದಸ್ಯರಿಂದ ವಿಶೇಷ ನಮಾಜ್

ಸಂಜೆವಾಣಿ ವಾರ್ತೆ

ಬಳ್ಳಾರಿ, ಮೇ.28 ನಗರದ ಈದ್ಗಾ ಮೈದಾನದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸೈಯ್ಯದ್ ನಾಸೀರ್ ಹುಸೇನ್ ಅವರು ಬಕ್ರೀದ್ ಹಬ್ಬದ ಅಂಗವಾಗಿ ವಿಶೇಷ ನಮಾಜ್ ಸಲ್ಲಿಸಿದರು.

ಪವಿತ್ರ ಬಕ್ರೀದ್ ಹಬ್ಬವು ತ್ಯಾಗ, ದಯೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ಸಾರುತ್ತದೆ. ಈ ಸಂದರ್ಭದಲ್ಲಿ ದೇಶದ ಏಕತೆ, ರಾಜ್ಯದ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸದಾ ನೆಲೆಸಿರಲಿ ಎಂದು ಪ್ರಾರ್ಥಿಸಿದರು.

ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿ, ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸಂತೋಷ ನೆಲೆಸಲಿ ಎಂದು ಹಾರೈಸಿದರು.