ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಳ್ಳಾರಿ ನಗರದಿಂದ 10 ಸಾವಿರ ಜನ: ಭರತ್ ರೆಡ್ಡಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ.19:
ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ, 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಅಂದಾಜು 10 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ನಗರದ  ಅವರ ಕಚೇರಿಯಲ್ಲಿ  ಮಹಾನಗರ ಪಾಲಿಕೆಯ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಯುವ ಮತ್ತು ಮಹಿಳಾ ಕಾಂಗ್ರೆಸ್ ಮುಖಂಡರ ಜೊತೆಗೆ ಸಮಾವೇಶ ಯಶಸ್ವಿಗೊಳಿಸುವ ಕುರಿತು ಸಭೆ ನಡೆಸಿ, ಚರ್ಚಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ, ಸಾವಿರಾರು ಕೋಟಿ ರೂ.ಗಳ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಹೀಗಾಗಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯನ್ನು ಜನರ ಮನೆ, ಮನಗಳಿಗೆ ತಲುಪಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದರು.
ಸಭೆಯಲ್ಲಿ ಪಾಲಿಕೆಯ ಸದಸ್ಯರಾದ ಪಿ.ಗಾದೆಪ್ಪ, ಪ್ರಭಂಜನಕುಮಾರ್, ರಾಜಶೇಖರ, ವಿ.ಕುಬೇರ, ಮಿಂಚು ಸೀನಾ, ರಾಮಾಂಜನೇಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಎನ್ಎಂ ಅಭಿಲಾಶ್,  ಸೇರಿದಂತೆ ಹಲವರು ಇದ್ದರು.