Home ಜಿಲ್ಲೆ ಮೈಸೂರು ರೈತರಿಗೆ ಪರ್ಯಾಯ ಬೆಳೆಗಳನ್ನು ಬೆಳೆಯುವ ಬಗ್ಗೆ ಅರಿವು ಮೂಡಿಸಿ: ಮನೋಜ್ ಕುಮಾರ್ ಮೀನಾ

ರೈತರಿಗೆ ಪರ್ಯಾಯ ಬೆಳೆಗಳನ್ನು ಬೆಳೆಯುವ ಬಗ್ಗೆ ಅರಿವು ಮೂಡಿಸಿ: ಮನೋಜ್ ಕುಮಾರ್ ಮೀನಾ

ಸಂಜೆವಾಣಿ ವಾರ್ತೆ
ಮಂಡ್ಯ:ಜು.04:-
ಮುಂಗಾರು ವಿಳಂಬ ಮತ್ತು ಬರ ಪರಿಸ್ಥಿತಿಯನ್ನು ನಿರ್ವಹಿಸಲು ಜಿಲ್ಲೆಯಲ್ಲಿ ಪರ್ಯಾಯ ಬೆಳೆ ಯೋಜನೆ, ಬಿತ್ತನೆ ಸಲಹೆ,ಜಾನುವಾರು ಗಳಿಗೆ ಮೇವಿನ ವ್ಯವಸ್ಥೆ, ಬೆಳೆ ವಿಮೆ, ಪೌತಿ ಖಾತೆ ಆಂದೋಲನ ಹಾಗೂ ಇತರೆ ವಿಷಯಗಳ ಬಗ್ಗೆ ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ) ಕಾರ್ಯದರ್ಶಿಗಳು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ರವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆ, ಮುಂಗಾರು ಪರಿಸ್ಥಿತಿ ಹಾಗೂ ಇತರೆ ಪ್ರಮುಖ ವಿಷಯಗಳ ಕುರಿತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದರು.
ಅರ್ಹ ರೈತರು ಬೆಳೆ ವಿಮೆಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಗರಿಷ್ಠ ಪ್ರಮಾಣದ ರೈತರು ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಪೌತಿ ಖಾತೆ ಆಂದೋಲನ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ,ಸಮರ್ಪಕ ವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.


ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸಲು ಸಕಾಲ ಯೋಜನೆ ಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ನಿಗದಿತ ಕಾಲಮಿತಿ ಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ ಅಧಿಕಾರಿಗಳು ಜವಬ್ದಾರರಾಗುತ್ತಾರೆ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಪ್ರಕ್ರಿಯೆಯು ಜೂನ್ 30 ರಿಂದ ಆರಂಭವಾಗಿದ್ದು, ಜುಲೈ 29ರವರೆಗೆ ನಡೆಯಲಿದೆ. ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿ ಗಳಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ, ಎನುಮರೇಷನ್ (ಇಟಿumeಡಿಚಿಣioಟಿ) ಅರ್ಜಿ ಗಳನ್ನು ಭರ್ತಿ ಮಾಡಿಕೊಡು ವಂತೆ ತಿಳಿಸಲು ಅಗತ್ಯ ಅರಿವು ಮೂಡಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.


ಮಂಡ್ಯ ಜಿಲ್ಲೆಯಲ್ಲಿ 15 ಲಕ್ಷ ಮತದಾರರು ಇದ್ದು ಮತದಾರರು ಆನ್‍ಲೈನ್ ಮೂಲಕ ಎಸ್‍ಐಆರ್ ಫಾರ್ಮ್ ಅನ್ನು ಭರ್ತಿ ಮಾಡ ಬಹುದಾಗಿದೆ ಎಂದು ಸಭೆಯಲ್ಲಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ರವರು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಜಿಲ್ಲೆಯಾದ್ಯಂತ ಸುಮಾರು ಶೇ.28 ರಷ್ಟು ಮಳೆ ಕೊರತೆ ಉಂಟಾಗಿದೆ.ಈ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಮಳೆ ಕೊರತೆ ಯಾಗಿದೆ.ಅಲಸಂದೆ, ತೊಗರಿ, ಹೆಸರು ಮುಂತಾದ ಬೆಳೆಗಳ ಬಿತ್ತನೆಗೂ ಸಹ ನೀರಿನ ಕೊರತೆ ಉಂಟಾಗಿದೆ.


ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳುಗಳಾದ ಮುಸುಕಿನ ಜೋಳ, ತೊಗರಿ, ಉದ್ದು, ಹೆಸರು, ಅಲಸಂದೆ, ಎಳ್ಳು, ಹರಳು ಮುಂತಾದ ಬೆಳೆಗಳ ನಿಗದಿತ ಬಿತ್ತನೆ ಕ್ಷೇತ್ರದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ.
ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ (ಕೆ.ಆರ್.ಎಸ್) ಅಣೆಕಟ್ಟೆ ಯಲ್ಲಿ ನೀರಿನ ಮಟ್ಟ 81 ಅಡಿಗೆ ಇಳಿಕೆಯಾಗಿದೆ. ಹಿಂದಿನ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು.


ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಇಲ್ಲದ ಕಾರಣ ಕೃಷಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.ಈಗ ಲಭ್ಯವಿರುವ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ.
ಈ ಪರಿಸ್ಥಿತಿಯನ್ನು ನಿಭಾಯಿಸಲು ಕೃಷಿ ಇಲಾಖೆಯು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮುಂಗಾರು ಮಳೆ ವೈಫಲ್ಯ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ನಷ್ಟವಾಗದಂತೆ ತಡೆಯಲು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದ್ದು ಕಡಿಮೆ ನೀರಿನಲ್ಲಿ ಬೆಳೆಯ ಬಹುದಾದ ಪರ್ಯಾಯ ಬೆಳೆಗಳ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೃಷಿ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿರವರು ಮಾತನಾಡಿ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ 289 ಗ್ರಾಮಗಳಿಗೆ ಎದುರಾಗಬಹುದಾಗಿದೆ. ಆದುದರಿಂದ ಪೂರ್ವಭಾವಿ ಯಾಗಿ ಖಾಸಗಿ ಬೋರ್ ವೆಲ್ ಗಳ ಮೂಲಕ ನೀರು ಪಡೆ ಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
167 ಬೋರ್ ವೆಲ್ ಗಳಲ್ಲಿ ನೀರಿನ ಇಳುವರಿ ಕಡಿಮೆ ಆಗುತ್ತಿದೆ.ಅದಕ್ಕೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ.


ಬೇಸಿಗೆಯಲ್ಲಿ ನೀರಿನ ಅಭಾವ ಎದುರಿಸಬಹುದಾದ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಸಲು ಉದ್ದೇಶಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಗಳನ್ನು (ಊeಟಠಿಜesಞs) ಸ್ಥಾಪಿಸಲಾಗಿದೆ. ಸಾರ್ವಜ ನಿಕರು ನೀರಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಬ ಹುದು.ಮತ್ತು ಪರಿಹರಿಸಿ ಕೊಳ್ಳಬಹುದು.
ಶುದ್ಧ ಕುಡಿಯುವ ನೀರಿನ ಘಟಕಗಳ (ಖಔ ಠಿಟಚಿಟಿಣs) ನಿರ್ವಹಣೆ ಸರಿಯಾಗಿ ನಡೆಯುವಂತೆ ಮತ್ತು ನೀರು ಪೂರೈಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಪಂಚಾ ಯತ್ ಅಭಿವೃದ್ಧಿ ಅಧಿಕಾರಿಗಳಿಗೆ (Pಆಔ) ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.