
ಸಂಜೆವಾಣಿ ನ್ಯೂಸ್
ಮೈಸೂರು, ಜು.05:- ರೈತರು ಡಿಎಪಿ, ಯೂರಿಯಾ ಸೇರಿದಂತೆ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಿ ಸಾಯವಯ ಕೃಷಿಯತ್ತ ಒಲವು ತೋರಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಮೈಸೂರು ತಾಲೂಕಿನ ನಾಗನಹಳ್ಳಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಮತ್ತು ಸಂಶೋಧÀನಾ ಕೇಂದ್ರದ ಆವರಣದಲ್ಲಿ ಶುಕ್ರವಾರ ಮೈಸೂರು ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಇಳುವರಿ ದೃಷ್ಟಿಯಿಂದ ಹೆಚ್ಚಿನ ರಸಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಇದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಹೆಚ್ಚು ಹೆಚ್ಚು ರಾಸಾಯನಿಕ ಗೊಬ್ಬರ ಬಳಕೆಯಿಂದ ಹೃದಯ ಸಮಸ್ಯೆ, ಕ್ಯಾನ್ಸರ್‍ನಂತ ಗಂಭೀರ ಕಾಯಿಲೆಗಳು ಬರುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ಹಂತ ಹಂತವಾಗಿ ರಸಗೊಬ್ಬರ ಪೂರೈಕೆಯನ್ನು ಕಡಿಮೆ ಮಾಡುತ್ತಿದ್ದು, ರೈತರು ಸ್ವಯಿಚ್ಛೆಯಿಂದಲೇ ರಸಗೊಬ್ಬರ ಬಳಸುವುದನ್ನು ನಿಲ್ಲಿಸಬೇಕು ಎಂದರು.
ಪ್ರಸಕ್ತ ಹಂಗಾಮಿನಲ್ಲಿ ಶೇ.50ರಷ್ಟು ಡಿಎಪಿ ರಾಸಾಯನಿಕ ಗೊಬ್ಬರದ ಪೂರೈಕೆ ನಿಲ್ಲಿಸಲಾಗಿದ್ದು, ರೈತರು ಇದಕ್ಕೆ ಪರ್ಯಾಯವಾದ ಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಮುಂದಿನ ವರ್ಷ ಯೂರಿಯಾ ಪೂರೈಕೆಯಲ್ಲೂ ಇದೇ ವಿಧಾನ ಅನುಸರಿಸಲಿದ್ದು, ಇದಕ್ಕೆ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಸಾಯನಿಕ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಉಪಯೋಗಿಸುವುದರಿಂದ ಮಣ್ಣಿನÀ ಫಲವತ್ತತೆ, ಕಡಿಮೆ ಇಳುವರಿ, ಬೆಳೆ ನಾಶ ಮತ್ತು ಮನುಷ್ಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಇದನ್ನು ತಪ್ಪಿಸಲು ಕೃಷಿ ಪದ್ದತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಾವಯವ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದರು.
ಹಿಂದೆ ಸಾವಯವ ಗೊಬ್ಬರಗಳನ್ನು ಬಳಸಿಕೊಂಡು ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತಿತ್ತು, ನಂತರ ರಾಸಾಯನಿಕ ಗೊಬ್ಬರಗಳಿಗೆ ಮಾರು ಹೋಗಲಾಗಿದೆ. ಇದರ ದುಷ್ಪರಿಣಾಮಗಳ ಬಗ್ಗೆ ಕೃಷಿ ತಜ್ಞರು ಮತ್ತು ಸಂಶೋಧÀಕರು ಎಚ್ಚರಿಸುತ್ತಲೇ ಇz್ದÁರೆ. ರೈತರು ರಾಸಾಯನಿಕ ಗೊಬ್ಬರ ಬಳಸುವುದನ್ನು ನಿಲ್ಲಿಸಿ, ಸಾವಯವ ಕೃಷಿ, ನೈಸರ್ಗಿಕ ಕೃಷಿ, ಸಿರಿಧಾನ್ಯದ ಬೆಳೆಗಳನ್ನು ಬೆಳೆಯುವ ಮೂಲಕ ರಾಸಾಯನಿಕದಿಂದ ಹೊರಬರಬೇಕು ಎಂದು ಕರೆ ನೀಡಿದರು.
ಸಾವಯವ ಕೃಷಿ ತಾಲೂಕು: ರಾಜ್ಯದ ಮೊದಲ ಸಾವಯವ ಕೃಷಿ ತಾಲೂಕು ಎಂದು ಉತ್ತರ ಕನ್ನಡದ ಜೋಯಿಡಾ ತಾಲೂಕನ್ನು ಗುರುತಿಸಿದ್ದು, ಶೇ.70ರಷ್ಟು ಅರಣ್ಯದಿಂದ ಕೂಡಿರುವ ಈ ಭಾಗದಲ್ಲಿ ರೈತರು ಸಂಪೂರ್ಣವಾಗಿ ರಾಸಾಯನಿಕವಲ್ಲದ ಕೃಷಿ ಚಟುವಟಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹಮ್ಮದ್ ಪರ್ವೇಜ್ ಬಂಥÀನಾಳ್, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನುಪ್ ಕೆ.ಜಿ, ಬೀಜ ಪ್ರಮಾಣೀಕರಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಸಂದಾನಂದ, ಡಾ.ಜಿ.ಟಿ. ಪುತ್ರ, ಮೈಸೂರು ವಿಭಾಗದ ಜಂಟಿ ಕೃಷಿ ನಿರ್ದೇಶಕ ರವಿ ಹಾಗೂ ಅಧಿಕಾರಿಗಳು ಇದ್ದರು.